ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಭೈರತಿ ಬಸವರಾಜ್ ಜಾಮೀನು ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ.
ಈ ಮೂಲಕ ಬಿಜೆಪಿ ಶಾಸಕ ಭೈರತಿ ಬಸವರಾಜುಗೆ ಸಂಕಷ್ಟ ಎದುರಾಗಿದ್ದು, ಯಾವುದೇ ಕ್ಷಣದಲ್ಲಿ ಶಾಸಕರನ್ನು ಬಂಧಿಸುವ ಸಾಧ್ಯತೆಯಿದೆ.
ಈಗಾಗಲೇ ಭೈರತಿ ಬಸವರಾಜುಗಾಗಿ ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.





