Mysore
28
broken clouds

Social Media

ಸೋಮವಾರ, 15 ಜೂನ್ 2026
Light
Dark

ಮಂತ್ರಾಲಯಕ್ಕೆ ಭೇಟಿ ನೀಡಿದ ನಟ ರಿಷಬ್‌ ಶೆಟ್ಟಿ ಕುಟುಂಬ

ರಾಯಚೂರು: ನಟ ಹಾಗೂ ನಿರ್ದೇಶಕ ರಿಷಬ್‌ ಶೆಟ್ಟಿ ಅವರಿಂದು ಕುಟುಂಬ ಸಮೇತರಾಗಿ ಮಂತ್ರಾಲಯಕ್ಕೆ ಭೇಟಿ ನೀಡಿ ರಾಯರ ದರ್ಶನ ಪಡೆದರು.

ರಾಯಚೂರಿನ ಮಂತ್ರಾಲಯಕ್ಕೆ ಆಗಮಿಸಿ, ಗುರು ರಾಘವೇಂದ್ರ ಸ್ವಾಮಿ ದರ್ಶನ ಪಡೆದಿದ್ದಾರೆ. ಪತ್ನಿ ಪ್ರಗತಿ ಹಾಗೂ ತಮ್ಮ ಇಬ್ಬರು ಮಕ್ಕಳೊಂದಿಗೆ ಆಗಮಿಸಿ ಆಶೀರ್ವಾದ ಪಡೆದುಕೊಂಡಿದ್ದಾರೆ.

ಬಳಿಕ ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥ ಸ್ವಾಮಿಯವರಿಂದ ಆಶೀರ್ವಚನ ಪಡೆದುಕೊಂಡಿದ್ದಾರೆ. ಶ್ರೀಗಳು ರಿಷಭ್‌ ಶೆಟ್ಟಿ ದಂಪತಿಗಳಿಗೆ ಫಲ, ಮಂತ್ರಾಕ್ಷತೆ ನೀಡಿ ಆಶೀರ್ವದಿಸಿದ್ದಾರೆ.

Tags:
error: Content is protected !!