Mysore
27
few clouds

Social Media

ಶನಿವಾರ, 10 ಜನವರಿ 2026
Light
Dark

ದುರಂಧರ್‌ ಸಕ್ಸಸ್ | ‌ದಿಢೀರ್‌ ಸಂಭಾವನೆ ಏರಿಕೆ ; ದೃಶ್ಯಂ-3 ಚಿತ್ರದಿಂದ ಹೊರಬಂದ ಅಕ್ಷಯ್‌ ಖನ್ನಾ

ಮುಂಬೈ : ಬಾಲಿವುಡ್‌, ಟಾಲಿವುಡ್‌, ಸ್ಯಾಂಡಲ್‌ವುಡ್‌ ಸೇರಿದಂತೆ ಎಲ್ಲಾ ವುಡ್‌ಗಳಲ್ಲಿಯೂ ಧುರಂಧರ್‌ದೆ ಹಾವಳಿ. ಈ ವರ್ಷದ ಅತಿ ಹೆಚ್ಚು ಕೆಲಕ್ಷನ್ ಮಾಡಿದ ಸಿನಿಮಾ ಎಂಬ ಖ್ಯಾತಿಗೆ ‘ಧುರಂಧರ್’ ಲಗ್ಗೆ ಇಟ್ಟಿದೆ.

ಬಾಕ್ಸ್ ಆಫೀಸ್​​ನಲ್ಲಿ ಈ ಸಿನಿಮಾ ಕೇವಲ 20 ದಿನಕ್ಕೆ 600 ಕೋಟಿ ರೂಪಾಯಿ ಬಾಚಿಕೊಂಡಿದೆ. ಇನ್ನೂ ಈ ಸಿನಿಮಾದ ಅಬ್ಬರ ನಿಂತಿಲ್ಲ. ವಿದೇಶದಿಂದ ಬಂದ ಆದಾಯವನ್ನೂ ಸೇರಿಸಿದರೆ 20 ದಿನಕ್ಕೆ ಒಟ್ಟು ಕಲೆಕ್ಷನ್ 925 ಕೋಟಿ ರೂಪಾಯಿ ದಾಟಿದೆ.

ತೆರೆಮರೆಯಲ್ಲೆ ಇದ್ದ ಪ್ರತಿಭಾವಂತ ನಟ ಅಕ್ಷಯ್‌ ಖನ್ನಾ ಈ ಚಿತ್ರದಿಂದ ತಮ್ಮ ಖ್ಯಾತಿಯನ್ನು ಹೆಚ್ಚಿಸಿಕೊಂಡಿದ್ದಾರೆ. ಹಾಗಾಗಿ ಅವರ ಬೇಡಿಕೆ ಕೂಡ ಹೆಚ್ಚಿದೆ. ಇದರ ಪರಿಣಾಮವಾಗಿ ಅವರು ‘ದೃಶ್ಯಂ 3’ ನಿಮಾದಿಂದ ಹೊರನಡೆದಿದ್ದಾರೆ ಎಂಬ ಸುದ್ದಿ ಬಾಲಿವುಡ್‌ನಲ್ಲಿ ಹರಿದಾಡುತ್ತಿದೆ. ಇದಕ್ಕೆ ಕಾರಣ ಆಗಿರುವುದು ದುಬಾರಿ ಸಂಭಾವನೆಯೂ ಒಂದು. ‘ಧುರಂಧರ್’ ಸಿನಿಮಾದಲ್ಲಿ ಅಕ್ಷಯ್ ಖನ್ನಾ ಅವರು ರೆಹಮಾನ್ ಡಕಾಯಿತ್ ಎಂಬ ಪಾತ್ರವನ್ನು ಮಾಡಿದ್ದಾರೆ. ಇದು ವಿಲನ್ ಪಾತ್ರ. ಈ ಪಾತ್ರಕ್ಕಾಗಿ ಅವರು 2.5 ಕೋಟಿಯಿಂದ 3 ಕೋಟಿ ರೂಪಾಯಿ ತನಕ ಸಂಭಾವನೆ ಪಡೆದಿದ್ದರು ಎಂಬ ಮಾಹಿತಿ ಹರಿದಾಡುತ್ತಿದೆ. ‘ಧುರಂಧರ್’ ಸೂಪರ್ ಹಿಟ್ ಆಗಿದ್ದೇ ತಡ, ಅಕ್ಷಯ್ ಖನ್ನಾ ಅವರು ಏಕಾಏಕಿ ಸಂಭಾವನೆ ಹೆಚ್ಚಿಸಿಕೊಂಡಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ:-ಅಧಿಕಾರ ಹಂಚಿಕೆ ದೊಂಬರಾಟದಂತಿದೆ : ಎಚ್.ಡಿ.ದೇವೇಗೌಡ ಟೀಕೆ

‘ದೃಶ್ಯಂ 3’ ಸಿನಿಮಾದಲ್ಲಿ ಅಕ್ಷಯ್ ಖನ್ನಾ ಅವರು ಒಂದು ಪಾತ್ರ ಮಾಡಬೇಕಿತ್ತು. ಆದರೆ ಈಗ ಅವರು ದೊಡ್ಡ ಮೊತ್ತದ ಸಂಭಾವನೆ ಕೇಳುತ್ತಿರುವುದರಿಂದ ನಿರ್ಮಾಪಕರಿಗೆ ಚಿಂತೆ ಶುರುವಾಗಿದೆ. ಅಲ್ಲದೇ, ಅಕ್ಷಯ್ ಖನ್ನಾ ಅವರು ತಮ್ಮ ಪಾತ್ರದ ಲುಕ್ ಕೂಡ ಬದಲಾಗಬೇಕು ಎಂದು ಹಠ ಹಿಡಿದಿದ್ದಾರಂತೆ. ಈ ವಿಚಾರದಲ್ಲಿ ಚಿತ್ರತಂಡದ ಜೊತೆ ಮಾತುಕಥೆ ನಡೆದು, ಸಫಲವಾಗದ ಪರಿಣಾಮ ಅವರು ಚಿತ್ರತಂಡದಿಂದ ಹೊರನಡೆದಿದ್ದಾರೆ ಎಂಬ ಸುದ್ದಿ ಹಬ್ಬಿದೆ.

ಆದರೆ ಈ ಎಲ್ಲಾ ಅಂತೆ ಕಂತೆಗಳಿಗೆ ಚಿತ್ರತಂಡವಾಗಲಿ ಅಥವಾ ನಟ ಅಕ್ಷಯ್‌ ಖನ್ನಾ ಆಗಲಿ ಯಾವುದೇ ಅಧಿಕೃತ ಹೇಳಿಕೆ ನೀಡಿಲ್ಲ.

Tags:
error: Content is protected !!