Mysore
21
overcast clouds

Social Media

ಗುರುವಾರ, 01 ಜನವರಿ 2026
Light
Dark

ಓದುಗರ ಪತ್ರ:  ಮರ್ಯಾದಾ ಹತ್ಯೆಯಲ್ಲಿ ಜಾತಿ ಜೀವಂತಿಕೆ

ಓದುಗರ ಪತ್ರ

ಜಾತಿ ವ್ಯವಸ್ಥೆಯು ಅಸಮಾನತೆಯನ್ನು ಸೃಷ್ಟಿ ಮಾಡಿದೆ. ಈ ಜಾತಿ ವ್ಯವಸ್ಥೆ ಈಗಲೂ ಜೀವಂತ ವಾಗಿದೆ ಎನ್ನುವುದಕ್ಕೆ ಬೇರೆ ಜಾತಿಯ ಹುಡುಗನನ್ನು ಪ್ರೀತಿಸಿ ಮದುವೆಯಾದ ಕಾರಣಕ್ಕೆ ಗರ್ಭಿಣಿಯಾಗಿದ್ದ  ಮಗಳನ್ನೇ ಆಕೆಯ ತಂದೆ ಹಾಗೂ ಕುಟುಂಬಸ್ಥರು ಕೊಲೆ ಮಾಡಿರುವ ಘಟನೆ ಹುಬ್ಬಳ್ಳಿ ಜಿಲ್ಲೆಯಲ್ಲಿ ನಡೆದಿರುವುದು ಸಾಕ್ಷಿಯಾ ಗಿದೆ.

ಜಾತಿ ಶ್ರೇಷ್ಠತೆಯನ್ನು ಪ್ರತಿಬಿಂಬಿಸುವ ಸಲುವಾಗಿ ದೌರ್ಜನ್ಯ ದಬ್ಬಾಳಿಕೆ ಮತ್ತು ಕೊಲೆ ಹೀಗೆ ಕ್ರೌರ್ಯದ ಹಾದಿ ಹಿಡಿದಿರುವ ವ್ಯವಸ್ಥೆ ಬದಲಾಗಬೇಕಾಗಿದೆ. ಹಾಗೂ ಜಾತಿಯ ನಶೆಯಲ್ಲಿದ್ದು ಇಂತಹ ಕೃತ್ಯಗಳನ್ನು ಎಸಗುವವರ ವಿರುದ್ಧ ಕಠಿಣ ಶಿಕ್ಷೆ ನೀಡಬೇಕು.

– ಪವನ್ ಜಯರಾಂ, ಸಿದ್ದಯ್ಯನಪುರ , ಚಾಮರಾಜನಗರ

Tags:
error: Content is protected !!