ಬೆಂಗಳೂರು: ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲ್ಲೂಕಿನ ಜವನಗೊಂಡನಹಳ್ಳಿ ಬಳಿ ಸಂಭವಿಸಿದ ಕಂಟೇನರ್ ಹಾಗೂ ಖಾಸಗಿ ಬಸ್ ಭೀಕರ ಅಪಘಾತದಲ್ಲಿ ಮೃತಪಟ್ಟವರಿಗೆ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಚಿತ್ರದುರ್ಗ ಬಳಿ ಸಂಭವಿಸಿದ ಲಾರಿ ಹಾಗೂ ಬಸ್ ನಡುವಿನ ಅಪಘಾತದಲ್ಲಿ ಹಲವು ಪ್ರಯಾಣಿಕರು ಸಜೀವ ದಹನವಾದ ಘೋರ ದುರಂತದ ಸುದ್ದಿ ಕೇಳಿ ಎದೆ ನಡುಗಿತು. ಕ್ರಿಸ್‌ಮಸ್ ರಜೆಯಲ್ಲಿ ಊರಿಗೆ ತೆರಳುತ್ತಿದ್ದವರ ಪ್ರಯಾಣ ಈ ರೀತಿ ದುರಂತದಲ್ಲಿ ಕೊನೆಗೊಂಡಿರುವುದು ವಿಷಾದನೀಯ.
ಅಪಘಾತದ ಬಗ್ಗೆ ಸೂಕ್ತ ತನಿಖೆ ನಡೆಸಿ, ಕಾರಣವನ್ನು ಪತ್ತೆಹಚ್ಚಲಾಗುವುದು. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ಅಪಘಾತದಲ್ಲ ಮಡಿದ ಕುಟುಂಬಸ್ಥರ ದುಃಖದಲ್ಲಿ ನಾನೂ ಭಾಗಿ ಎಂದು ಕಂಬನಿ ಮಿಡಿದಿದ್ದಾರೆ.





