Mysore
19
clear sky

Social Media

ಶುಕ್ರವಾರ, 02 ಜನವರಿ 2026
Light
Dark

ಓದುಗರ ಪತ್ರ: ರಸ್ತೆ ಕಾಮಗಾರಿ ಪೂರ್ಣಗೊಳಿಸಿ

ಓದುಗರ ಪತ್ರ

ಚಾಮರಾಜನಗರದ ಗುಂಡ್ಲುಪೇಟೆ ಪಟ್ಟಣದ ವಾರ್ಡ್ ೨೩ ರ ಹೊಸೂರು ಜನನಿಬಿಡ ಪ್ರದೇಶವಾಗಿದ್ದು, ಅಕ್ಕ ಪಕ್ಕದಲ್ಲಿ ಶಾಲೆ ಇದ್ದು, ಪೋಷಕರು ತಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸಲು ಈ ರಸ್ತೆಯ ಮೂಲಕವೇ ಓಡಾಡುತ್ತಾರೆ. ಈ ರಸ್ತೆ ಅಭಿವೃದ್ಧಿ ಕಾಮಗಾರಿ ಅರ್ಧಕ್ಕೆ ನಿಂತು ಹೋಗಿರುವುದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ.

ಇಲ್ಲಿರುವ ಸಾರ್ವಜನಿಕ ಶೌಚಾಲಯವು ಬಳಕೆಯಾಗದೆ ಗಿಡ ಬಳ್ಳಿಗಳು ಬೆಳೆದು ನಿಂತಿರುವ ಹಿನ್ನೆಲೆಯಲ್ಲಿ ಸೊಳ್ಳೆಗಳು ಹೆಚ್ಚಾಗಿ ರೋಗಗಳು ಹರಡುವ ಭೀತಿಯುಂಟಾಗಿದೆ. ಗುಂಡ್ಲುಪೇಟೆ ಪುರಸಭೆ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸಲು ಕ್ರಮ ಕೈಗೊಳ್ಳಬೇಕು ಹಾಗೂ ಸಾರ್ವಜನಿಕ ಶೌಚಾಲಯದ ಸುತ್ತ ಬೆಳೆದಿರುವ ಗಿಡಗಳನ್ನು ತೆರವುಗೊಳಿಸಿ ಶೌಚಾಲಯವನ್ನು ಸಾರ್ವಜನಿಕರ ಬಳಕೆಗೆ ಮುಕ್ತಗೊಳಿಸಲು ಕ್ರಮ ಕೈಗೊಳ್ಳಬೇಕಾಗಿದೆ.

 -ನಾಗೇಶ್, ಮಾನಸಗಂಗೋತ್ರಿ, ಮೈಸೂರು

Tags:
error: Content is protected !!