Mysore
34
few clouds

Social Media

ಶನಿವಾರ, 25 ಏಪ್ರಿಲ 2026
Light
Dark

ಸಿಲಿಂಡರ್ ಸ್ಪೋಟ ಪ್ರಕರಣ : ಸಾವಿನ ಸಂಖ್ಯೆ 3ಕ್ಕೆ ಏರಿಕೆ

ಮೈಸೂರು : ಮೈಸೂರು ಅರಮನೆ ಮುಂಭಾಗ ನಿನ್ನೆ ಸಂಜೆ ನಡೆದಿದ್ದ ಹೀಲಿಯಂ ಸ್ಫೋಟ ಪ್ರಕರಣದಲ್ಲಿ ಸಾವಿನ ಸಂಖ್ಯೆ ಇದೀಗ ಮೂರಕ್ಕೆ ಏರಿಕೆಯಾಗಿದೆ.

ಬೆಂಗಳೂರಿನ ಲಕ್ಷ್ಮಿ ಮೃತ ಮಹಿಳೆಯಾಗಿದ್ದಾರೆ. ನಿನ್ನೆ ಸಂಜೆ ನಡೆದ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಲಕ್ಷ್ಮಿ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇದೀಗ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

ಬೆಂಗಳೂರಿನ ಕಾಮಾಕ್ಷಿಪಾಳ್ಯ ನಿವಾಸಿ ರಾಜೇಶ್ ಪತ್ನಿಯಾದ ಮೃತ ಮಹಿಳೆ ಮೂಲತಃ ಮಂಡ್ಯದ ಹೊಸಹಳ್ಳಿ ಗ್ರಾಮದ ನಿವಾಸಿ.

ರಾಜೇಶ್ ಬೆಂಗಳೂರಿನಲ್ಲಿ ಆಟೋ ಓಡಿಸಿಕೊಂಡು ಜೀವನ ಸಾಗಿಸುತ್ತಿದ್ದರು. ನೆನ್ನೆ ಮೈಸೂರಿನ ಬೆಳವಾಡಿಯ ಸಂಬಂಧಿಕರ ಮನೆಗೆ ಬಂದಿದ್ದರು. ಈ ವೇಳೆ ಅರಮನೆ ನೋಡಲೆಂದು ಬಂದಿದ್ದರು. ದುರಂತ ಘಟನೆಯಿಂದ ಲಕ್ಷ್ಮಿ
ಹೊಟ್ಟೆಯಿಂದ ಕರುಳಿನ ಭಾಗ ಕಿತ್ತು ಬಂದಿತ್ತು
ತಲೆ, ಕೈ , ಕಾಲಿನ ಭಾಗ ಕೂಡ ಛಿದ್ರವಾಗಿತ್ತು.

Tags:
error: Content is protected !!