Mysore
29
scattered clouds

Social Media

ಮಂಗಳವಾರ, 30 ಡಿಸೆಂಬರ್ 2025
Light
Dark

ಜೆಡಿಎಸ್‌ ಜೊತೆ ಮೈತ್ರಿ ವಿಚಾರ: ವರಿಷ್ಠರ ತೀರ್ಮಾನಕ್ಕೆ ಬದ್ಧ ಎಂದ ವಿಜಯೇಂದ್ರ

B Y Vijayendra

ಬೆಂಗಳೂರು: ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಬಿಜೆಪಿ ಜೊತೆ ಜೆಡಿಎಸ್‌ ಮೈತ್ರಿ ಕಷ್ಟ ಎಂದು ಮಾಜಿ ಎಚ್‌ಡಿಡಿ ಹೇಳಿಕೆ ಕುರಿತು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಪ್ರತಿಕ್ರಿಯೆ ನೀಡಿದ್ದು, ಈ ವಿಚಾರದಲ್ಲಿ ಹೈಕಮಾಂಡ್‌ ತೀರ್ಮಾನಕ್ಕೆ ಬದ್ಧ ಎಂದು ಹೇಳಿದ್ದಾರೆ.

ಈ ಕುರಿತು ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇವೇಗೌಡರ ಬಗ್ಗೆ ನನಗೆ ಅಪಾರ ಗೌರವವಿದೆ. ನನ್ನ ಬಗ್ಗೆಯೂ ದೇವೇಗೌಡರು ಒಳ್ಳೆಯ ಮಾತನಾಡಿದ್ದಾರೆ. ಕಾರ್ಯಕರ್ತರಿಗೆ ವಿಶ್ವಾಸ ಬರುವಂತೆ ಮಾಡುವುದು ನಮ್ಮ ಕೆಲಸ. ಜೆಡಿಎಸ್‌ ಜೊತೆ ಮೈತ್ರಿ ಮೋದಿಯವರ ಅಪೇಕ್ಷೆ. ಕಾರ್ಯಕರ್ತರಿಗೆ ಏನು ಸಂದೇಶ ಕೊಡಬೇಕಿತ್ತೋ ಅದನ್ನು ಕೊಟ್ಟೆ ವರಿಷ್ಠರು ತೀರ್ಮಾನ ಮಾಡುತ್ತಾರೆ. ವರಿಷ್ಠರ ತೀರ್ಮಾನಕ್ಕೆ ನಾವೆಲ್ಲಾ ಬದ್ಧ ಎಂದು ಹೇಳಿದರು.

Tags:
error: Content is protected !!