Mysore
20
clear sky

Social Media

ಶುಕ್ರವಾರ, 02 ಜನವರಿ 2026
Light
Dark

ಚಾಮರಾಜನಗರ| ಇಟ್ಟಿಗೆ ಬೇಯಿಸಲು ಮರಗಳ ಮಾರಣಹೋಮ

ಚಾಮರಾಜನಗರ: ಇಟ್ಟಿಗೆ ಬೇಯಿಸಲು ಮರಗಳ ಮಾರಣಹೋಮ ನಡೆಸಿರುವ ಘಟನೆ ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನಲ್ಲಿ ನಡೆದಿದೆ.

ಇಲ್ಲಿನ ಹಲವು ಗ್ರಾಮಗಳಲ್ಲಿ 30ಕ್ಕೂ ಹೆಚ್ಚು ಮರಗಳನ್ನು ದುಷ್ಕರ್ಮಿಗಳು ಕಡಿದು ಹಾಕಿದ್ದಾರೆ. ಕೆಂಪಯ್ಯನಹಟ್ಟಿ, ರಾಮಾಪುರ, ದೊಮ್ಮನಗದ್ದೆ, ಪಳನಿಮೇಡು ಗ್ರಾಮದಲ್ಲಿ ಲೈಸೆನ್ಸ್‌ ಪಡೆಯದೇ ಅಕ್ರಮವಾಗಿ ಇಟ್ಟಿಗೆ ಫ್ಯಾಕ್ಟರಿಗಳು ತಲೆ ಎತ್ತಿದ್ದು, ಇಟ್ಟಿಗೆ ಬೇಯಿಸಲು ಮರಗಳನ್ನು ಕಡಿಯಲಾಗುತ್ತಿದೆ.

ಈ ಬಗ್ಗೆ ಅರಣ್ಯ ಇಲಾಖೆಗೆ ಮಾಹಿತಿಗಳಿದ್ದರೂ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂಬ ಆರೋಪ ಕೇಳಿಬಂದಿದೆ. ಇದು ಮಲೆಮಹದೇಶ್ವರ ವನ್ಯಜೀವಿಧಾಮ ಭಾಗದ ವ್ಯಾಪ್ತಿಗೆ ಬರುತ್ತಿದೆ. ಅರಣ್ಯ ಇಲಾಖೆ ಅಧಿಕಾರಿಗಳು ಕ್ರಮ ಕೈಗೊಳ್ಳುವಂತೆ ಒತ್ತಾಯಗಳು ಕೇಳಿಬಂದಿವೆ.

Tags:
error: Content is protected !!