Mysore
26
scattered clouds

Social Media

ಶುಕ್ರವಾರ, 02 ಜನವರಿ 2026
Light
Dark

ಮುಂದಿನ ಎರಡ್ಮೂರು ತಿಂಗಳಲ್ಲಿ ಜಿಲ್ಲಾ, ತಾಲ್ಲೂಕು ಪಂಚಾಯ್ತಿ ಚುನಾವಣೆ : ಕಾರ್ಯಕರ್ತರು ತಯಾರಾಗಿರಲು ಡಿಕೆಶಿ ಕರೆ

ಬೆಂಗಳೂರು : ಮುಂದಿನ ಎರಡು ಮೂರು ತಿಂಗಳ ಒಳಗಾಗಿ ಜಿಲ್ಲಾ ಪಂಚಾಯತ್ ಮತ್ತು ತಾಲೂಕು ಪಂಚಾಯಿತಿ ಗಳಿಗೆ ಚುನಾವಣೆ ನಡೆಸಲು ತಯಾರಿ ಮಾಡಿಕೊಳ್ಳುವುದಾಗಿ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.

ಪಕ್ಷದ ಭಾರತ್ ಜೋಡು ಭವನದಲ್ಲಿ ಇಂದು ನಡೆದ ಕಾಂಗ್ರೆಸ್ ಮತ್ತು ಸೇವಾದಳದ ಸಂಸ್ಥಾಪನಾ ದಿನಾಚರಣೆಯಲ್ಲಿ ಮಾತನಾಡಿದ ಅವರು ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಹೆಚ್ಚು ದಿನ ಮುಂದೂಡಲು ಸಾಧ್ಯವಿಲ್ಲ ಹೀಗಾಗಿ ಮೀಸಲಾತಿ ಹಾಗೂ ನ್ಯಾಯಾಲಯದಲ್ಲಿರುವ ಅರ್ಜಿÀಗಳನ್ನು ಎರಡು ಮೂರು ತಿಂಗಳ ಒಳಗಾಗಿ ಇತ್ಯಾರ್ಥ ಪಡಿಸಿ ಇತ್ಯರ್ಥಪಡಿಸಿ ಚುನಾವಣೆ ನಡೆಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ ಖರ್ಗೆ ಅವರಿಗೆ ಸೂಚನೆ ನೀಡಿದ್ದಾರೆ. ಅದೇ ಸಂದರ್ಭದಲ್ಲಿ ಗ್ರೇಟರ್ ಬೆಂಗಳೂರು ವ್ಯಾಪ್ತಿಯಲ್ಲಿನ 5 ಪಾಲಿಕೆಗಳ 369 ಸದಸ್ಯರ ಆಯ್ಕೆಗೂ ಚುನಾವಣೆ ನಡೆಯಲಿದೆ ಎಂದು ಹೇಳಿದರು .

ಮೀಸಲಾತಿ ನಿಗದಿಯಾದ ಬಳಿಕ ಚುನಾವಣೆಯ ಫಾರಂ ಗಾಗಿ ಪಕ್ಷಕ್ಕೆ ಅರ್ಜಿ ಸಲ್ಲಿಸಬಹುದು ಎಂದು ಯಾರು ಕಾಯುತ್ತಾ ಕುಳಿತುಕೊಳ್ಳುವಂತಿಲ್ಲ. ಇಂದಿನಿಂದಲೇ ಅರ್ಜಿ ಸ್ವೀಕಾರ ಆರಂಭವಾಗಲಿದ್ದು ಜನವರಿ 15ಕ್ಕೆ ಮುಕ್ತಾಯಗೊಳ್ಳಲಿದೆ. ಸಾಮಾನ್ಯ ವರ್ಗದವರು 50,000 ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು 25,000 ಪಾವತಿಸಿ ಅರ್ಜಿ ಸಲ್ಲಿಸಬೇಕು. ಅರ್ಜಿಯೊಂದಿಗೆ ಕಟ್ಟಡ ವಂತಿಕೆಯನ್ನು ಸ್ವೀಕರಿಸಲಾಗುತ್ತಿರುವ ಹಣವನ್ನು ಪಕ್ಷದ ಕಟ್ಟಡ ನಿರ್ಮಾಣಕ್ಕೆ ಬಳಸಲಾಗುವುದು. ಬೆಂಗಳೂರಿನಲ್ಲಿ ರಾಜ್ಯಮಟ್ಟದ ಕಚೇರಿಗೆ 70,000 ಜಿಲ್ಲಾ ಮಟ್ಟದ ಕಚೇರಿಗೆ 20 ಕೋಟಿ ವೆಚ್ಚ ಮಾಡಲಾಗುತ್ತಿದೆ. ಪಕ್ಷಕ್ಕೆ ನೂರು ಕಚೇರಿಗಳನ್ನು ನಿರ್ಮಿಸುವ ಗುರಿಗೆ ಈಗಾಗಲೇ 70 ಕಚೇರಿಗಳನ್ನು ಸ್ಥಳ ಗುರುತಿಸಲಾಗಿದೆ ಎಂದು ಅವರು ಎಂದು ತಿಳಿಸಿದರು.

ಕಳೆದ ಚುನಾವಣೆಯಲ್ಲಿ ವಿಧಾನಸಭೆ ಚುನಾವಣೆಯಲ್ಲಿ ಟಿಕೆಟ್ ಆಕಾಂಕ್ಷಿಗಳಿಂದ ತಲಾ ಎರಡು ಲಕ್ಷದಂತೆ 20 ಕೋಟಿ ಸಂಗ್ರಹಿಸಿ ಅದರಲ್ಲಿ ಭಾರತ ಜೋಡು ಭವನವನ್ನು ಪೂರ್ಣಗೊಳಿಸಲಾಯಿತು .ಈಗ ಸ್ಥಳೀಯ ಸಂಸ್ಥೆಗಳ ಚುನಾವಣೆ ಸ್ಪರ್ಧಾಕಾಂಕ್ಷಿಗಳು ನನಗೆ ಹಣ ನೀಡಬೇಡಿ. ಕಟ್ಟಡ ನಿರ್ಮಾಣಕ್ಕೆ ಕೊಡಿ. ಈ ಸಂದರ್ಭದಲ್ಲಿ ಮಹಿಳೆಯರ ಮಹಿಳಾ ಕಾರ್ಯಕರ್ತರಿಂದ ತಮಗೆ ಅರ್ಜಿ ಅರ್ಜಿ ಶುಲ್ಕದಲ್ಲಿ ವಿನಾಯಿತಿ ಇಡಬೇಕು ಎಂಬ ಬೇಡಿಕೆ ಬಂದಾಗ ಅದೆಲ್ಲ ಸಾಧ್ಯ ಇಲ್ಲ ಚುನಾವಣೆಗೆ ಎಷ್ಟು ಖರ್ಚಾಗುತ್ತದೆ ಎಂದು ನನಗೆ ಗೊತ್ತಿದೆ. ಇಷ್ಟ ಇದ್ದರೆ ಅರ್ಜಿ ಹಾಕಿ ಇಲ್ಲದಿದ್ದರೆ ಹಾಕಲೇಬೇಡಿ ಎಂದು ನಿಷ್ಟುರವಾಗಿ ಹೇಳಿದರು.

ಇದೇ ಸಂದರ್ಭದಲ್ಲಿ ಓಬಿಸಿ ವರ್ಗಕ್ಕೂ ಶುಲ್ಕ ರಿಯಾಯಿತಿ ನೀಡಬೇಕು ಎಂದು ಕೆಲವರು ಮನವಿ ಮಾಡಿದಾಗ ಏ ಸುಮ್ಮನಿರಪ್ಪ ಯಾವ ಒಬಿಸೀನು ಇಲ್ಲ ನಾನು ಒಬಿಸಿನೇ. ಒಕ್ಕಲಿಗರು ಲಿಂಗಾಯಿತರು ಆದಾಯ ಇಲ್ಲದ ಬ್ರಾಹ್ಮಣರು ಕೂಡ ಒಬಿಸಿಗಳೇ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಜೆ ಜಾರ್ಜ್ ಮಧ್ಯಪ್ರವೇಶಿಸಿದ್ದರಿಂದಾಗಿ ಮಹಿಳೆಯರ ಅರ್ಜಿ ಶುಲ್ಕವನ್ನು 25,000ಗಳಿಗೆ ಕಡಿತ ಮಾಡುವುದಾಗಿ ಘೋಷಿಸಿದರು.

Tags:
error: Content is protected !!