Mysore
21
mist

Social Media

ಬುಧವಾರ, 31 ಡಿಸೆಂಬರ್ 2025
Light
Dark

ಸಿಎಂ ಕುರ್ಚಿ ಉಳಿಸಿಕೊಳ್ಳಲು ಸಿದ್ದರಾಮಯ್ಯ ಯತ್ನ: ವಿಜಯೇಂದ್ರ ವಾಗ್ದಾಳಿ

b y vijayendra

ಬೆಳಗಾವಿ: ನಿಯಮಗಳನ್ನು ಗಾಳಿಗೆ ತೂರಿ ಕೇರಳದ ಅಕ್ರಮ ವಲಸಿಗರಿಗೆ ಮನೆ ಕಲ್ಪಿಸಿಕೊಡುವ ಮೂಲಕ ಸಿಎಂ ಸಿದ್ದರಾಮಯ್ಯ ಸಿಎಂ ಕುರ್ಚಿ ಉಳಿಸಿಕೊಳ್ಳಲು ಯತ್ನಿಸುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಬೆಳಗಾವಿಯಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೋಗಿಲು ಬಡಾವಣೆಯಲ್ಲಿ ಕೇರಳ ವಲಸಿಗರು ಅಕ್ರಮವಾಗಿ ನೆಲೆಸಿದ್ದರು. ಆ ಮನೆಗಳನ್ನು ಸರ್ಕಾರ ನೆಲಸಮ ಮಾಡಿತು. ನಂತರ ಕೆಸಿ ವೇಣುಗೋಪಾಲ್‌ ಬೆದರಿಕೆ ಹಾಕುವ ಕೆಲಸ ಮಾಡಿದರು. ಸಿಎಂ ಕುರ್ಚಿ ಉಳಿಸಿಕೊಳ್ಳಲು ಸಿದ್ದರಾಮಯ್ಯ ಪ್ರಯತ್ನ ಮಾಡುತ್ತಿದ್ದಾರೆ. ಆ ಮೇಲೆ ಸಿಎಂ ಕುರ್ಚಿ ಪಡೆದುಕೊಳ್ಳಲು ಡಿಕೆಶಿ ಪ್ರಯತ್ನಿಸುತ್ತಿದ್ದಾರೆ. ಈಗ ಸಿಎಂ ಹಾಗೂ ಡಿಸಿಎಂ ಅತಂತ್ರ ಪರಿಸ್ಥಿತಿಯಲ್ಲಿದ್ದಾರೆ. ಈಗ ಅಕ್ರಮ ವಲಸಿಗರಿಗೆ ಮನೆ ಕೊಡುವುದಾಗಿ ಸಿಎಂ ಸಿದ್ದರಾಮಯ್ಯ ಹೇಳುತ್ತಿದ್ದಾರೆ. ಇದೆಲ್ಲಾ ಬರೀ ಕುರ್ಚಿ ಉಳಿಸಿಕೊಳ್ಳಲು ಮಾತ್ರ ಎಂದು ವಾಗ್ದಾಳಿ ನಡೆಸಿದರು.

 

Tags:
error: Content is protected !!