Mysore
27
haze

Social Media

ಗುರುವಾರ, 01 ಜನವರಿ 2026
Light
Dark

ಹೊಸ ವರ್ಷಾಚರಣೆ: ರಾಜ್ಯದೆಲ್ಲೆಡೆ ತುರ್ತು ಚಿಕಿತ್ಸಾ ಸೇವೆಗೆ ಸಿದ್ಧತೆ

ಬೆಂಗಳೂರು: ಹೊಸ ವರ್ಷಾಚರಣೆಯ ವೇಳೆ ರಾಜ್ಯದ ವಿವಿಧೆಡೆ ಸಾರ್ವಜನಿಕರು ಅಸ್ವಸ್ಥರಾಗುವ ಹಾಗೂ ಆರೋಗ್ಯಕ್ಕೆ ಸಂಬಂಧಿಸಿದ ಇತರೆ ಸಮಸ್ಯೆಗಳಿಗೆ ಸಿಲುಕುವ ಸಾಧ್ಯತೆ ಇರುವುದರಿಂದ ಜಿಲ್ಲಾ ಮಟ್ಟದ ಆಸ್ಪತ್ರೆಗಳಲ್ಲಿ ಆಂಬುಲೆನ್ಸ್‌ ಹಾಗೂ ತುರ್ತು ವೈದ್ಯಕೀಯ ಚಿಕಿತ್ಸೆ ಸೇವೆ ಒದಗಿಸುವ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಆರೋಗ್ಯ ಇಲಾಖೆ ಸುತ್ತೋಲೆ ಹೊರಡಿಸಿದೆ.

ತುರ್ತು ಕರ್ತವ್ಯಕ್ಕಾಗಿ ಜಿಲ್ಲಾ ಮಟ್ಟದ ಎಲ್ಲಾ ಆಸ್ಪತ್ರೆಗಳಲ್ಲಿ ಪುರುಷರು, ಮಹಿಳೆಯರಿಗೆ ಪ್ರತ್ಯೇಕ ಕೊಠಡಿ ವ್ಯವಸ್ಥೆ ಮಾಡಬೇಕು. ಮಹಿಳೆಯರಿಗಾಗಿ ಮಹಿಳಾ ಸಿಬ್ಬಂದಿ ನಿಯೋಜಿಸಬೇಕು. ಆಂಬುಲೆನ್ಸ್‌ ಅನ್ನು ಸದಾ ಸನ್ನದ್ಧ ಸ್ಥಿತಿಯಲ್ಲಿ ಇರಿಸಬೇಕು. ಔಷಧಿಗಳು ಲಭ್ಯವಿರುವಂತೆ ನೋಡಿಕೊಳ್ಳಬೇಕೆಂದು ಆರೋಗ್ಯ ಇಲಾಖೆಯಿಂದ ನಿರ್ದೇಶನ ನೀಡಲಾಗಿದೆ.

ಇನ್ನು ಹೊಸ ವರ್ಷಾಚರಣೆ ವೇಳೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ರಾಜ್ಯದೆಲ್ಲೆಡೆ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಬೆಂಗಳೂರಿನಲ್ಲಿ 20,000 ಪೊಲೀಸರನ್ನು ನಿಯೋಜಿಸಲಾಗಿದ್ದು, ಜಿಲ್ಲೆಗಳಲ್ಲಿ ತಲಾ 1200 ಪೊಲೀಸರನ್ನು ನಿಯೋಜನೆ ಮಾಡಲಾಗುತ್ತದೆ.

Tags:
error: Content is protected !!