Mysore
19
overcast clouds

Social Media

ಶನಿವಾರ, 10 ಜನವರಿ 2026
Light
Dark

ಉತ್ತರಾಖಂಡದ ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್:‌ 7 ಮಂದಿ ಪ್ರಯಾಣಿಕರು ಸಾವು

ಉತ್ತರಾಖಂಡ: ಇಲ್ಲಿನ ಅಲ್ಮೋರಾದ ಭಿಕಿಯಾಸೈನ್‌ ಪ್ರದೇಶದಲ್ಲಿ ಪ್ರಯಾಣಿಕರಿದ್ದ ಬಸ್‌ ಕಂದಕಕ್ಕೆ ಉರುಳಿಬಿದ್ದ ಪರಿಣಾಮ ಏಳು ಮಂದಿ ಸಾವನ್ನಪ್ಪಿದ್ದು, 12 ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ.

ದ್ವಾರಹತ್‌ನಿಂದ ರಾಮನಗರಕ್ಕೆ ತೆರಳುತ್ತಿದ್ದ ಬಸ್‌ ಭಿಕಿಯಾಸೈನ್‌ ವಿನಾಯಕ ರಸ್ತೆಯಲ್ಲಿ ಜಾರಿ ಕಂದಕಕ್ಕೆ ಬಿದ್ದಿದೆ.

ಘಟನೆಯಲ್ಲಿ ಏಳು ಮಂದಿ ಸಾವನ್ನಪ್ಪಿದ್ದು, ಹಲವರಿಗೆ ಗಂಭೀರ ಗಾಯಗಳಾಗಿದೆ. ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಉತ್ತರಾಖಂಡ ಸಿಎಂ ಪುಷ್ಕರ್‌ ಸಿಂಗ್‌ ಧಾಮಿ ಪ್ರತಿಕ್ರಿಯೆ ನೀಡಿದ್ದು, ಭೀಕರ ಅಪಘಾತದ ಸುದ್ದಿ ಕೇಳಿ ದುಃಖವಾಯಿತು. ಈ ಘಟನೆ ಆಘಾತ ನೀಡಿದ್ದು, ಸಾವನ್ನಪ್ಪಿದವರ ಕುಟುಂಬಸ್ಥರಿಗೆ ಧೈರ್ಯ ನೀಡುವಂತೆ ಭಗವಂತನಲ್ಲಿ ಪ್ರಾರ್ಥಿಸುತ್ತೇನೆ. ಘಟನೆಯ ಕುರಿತು ನಿಕಟ ಮೇಲ್ವಿಚಾರಣೆ ಮಾಡುತ್ತಿದ್ದೇನೆ ಎಂದು ತಿಳಿಸಿದರು.

Tags:
error: Content is protected !!