Mysore
18
clear sky

Social Media

ಶುಕ್ರವಾರ, 02 ಜನವರಿ 2026
Light
Dark

ವಾಲ್ಮೀಕಿ ನಿಗಮ ಹಗರಣ ಪ್ರಕರಣ: ಮಾಜಿ ಸಚಿವ ಬಿ.ನಾಗೇಂದ್ರ ಆಪ್ತನ ಮನೆ ಮೇಲೆ ಸಿಬಿಐ ದಾಳಿ

b nagendra

ಬಳ್ಳಾರಿ: ವಾಲ್ಮೀಕಿ ನಿಗಮ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ.ನಾಗೇಂದ್ರ ಆಪ್ತನಿಗೆ ಸಿಬಿಐ ಶಾಕ್‌ ನೀಡಿದ್ದು, ಬಳ್ಳಾರಿಯಲ್ಲಿ ವಿಶ್ವನಾಥ್‌ ಮನೆ ಮೇಲೆ ದಾಳಿ ನಡೆಸಲಾಗಿದೆ.

ನಾಲ್ವರು ಸಿಬಿಐ ಅಧಿಕಾರಿಗಳು ಮಾಜಿ ಸಚಿವ ನಾಗೇಂದ್ರ ಆಪ್ತ ವಿಶ್ವನಾಥ್‌ ಮನೆ ಮೇಲೆ ದಾಳಿ ನಡೆಸಿ ಶೋಧ ನಡೆಸಿದ್ದಾರೆ. ದಾಳಿ ನಡೆಸಿದ ಅಧಿಕಾರಿಗಳು ವಿಶ್ವನಾಥ್‌ ಸಹೋದರನನ್ನು ಬ್ರೂಸ್‌ಪೇಟೆ ಠಾಣೆಗೆ ಕರೆತಂದಿದ್ದಾರೆ ಎಂದು ತಿಳಿದು ಬಂದಿದೆ. ವಿಶ್ವನಾಥ್‌ ಇಲ್ಲದಿರುವ ಹಿನ್ನೆಲೆ ಅವರ ಸಹೋದರ ಮಹೇಶ್‌ನನ್ನು ಪೊಲೀಸರು ಕರೆತಂದು ವಿಚಾರಣೆ ನಡೆಸಿದ್ದಾರೆ.

ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಕೋಟ್ಯಾಂತರ ರೂಪಾಯಿಗಳ ಹಗರಣವು ನಿಗಮದ ನಿಧಿಯನ್ನು ನಕಲಿ ಖಾತೆಗಳಿಗೆ ಅಕ್ರಮವಾಗಿ ವರ್ಗಾಯಿಸಿ ದುರ್ಬಳಕೆ ಮಾಡಿಕೊಂಡಿದ್ದು, ಇದರಲ್ಲಿ ಮಾಜಿ ಸಚಿವ ನಾಗೇಂದ್ರ ಸೇರಿದಂತೆ ಹಲವರು ಭಾಗಿಯಾಗಿದ್ದಾರೆ ಎಂದು ಜಾರಿ ನಿರ್ದೇಶನಾಲಯ ತನಿಖೆ ನಡೆಸುತ್ತಿದೆ.

 

Tags:
error: Content is protected !!