ಮಂಡ್ಯ: ಸಿರಿಧಾನ್ಯಗಳ ಕುರಿತು ಮುಂದಿನ ಪೀಳಿಗೆಗೆ ತಿಳಿಸುವುದು ಎಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಆರ್.ನಂದಿನಿ ಹೇಳಿದರು.
ಕೃಷಿ ಇಲಾಖೆ ವತಿಯಿಂದ ಮಂಡ್ಯ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಆಹಾರ ಹಾಗೂ ಪೌಷ್ಠಿಕ ಭದ್ರತೆ ಯೋಜನೆಯಡಿ ಸಿರಿಧಾನ್ಯ ರೋಡ್ ಶೋ ಮೂಲಕ ಮುಂದಿನ ಪೀಳಿಗೆಗೆ ಸಿರಿಧಾನ್ಯ ಬೆಳೆಗಳ ಬಗ್ಗೆ ಅರಿವು ಮೂಡಿಸುವ ಸಂಬಂಧ ಆಯೋಜಿಸಲಾಗಿದ್ದ ಸಿರಿಧಾನ್ಯ ರೋಡ್ ಶೋ ಕಾರ್ಯಕ್ರಮವನ್ನು ಹಸಿರು ಬಾವುಟ ಹಾರಿಸುವ ಮೂಲಕ ಉದ್ಘಾಟಿಸಿ ಮಾತನಾಡಿದರು.
ಎಲ್ಲಾ ಹೆಣ್ಣು ಮಕ್ಕಳು ಸಿರಿಧಾನ್ಯಗಳನ್ನು ಬಳಸಿ ಆರೋಗ್ಯಕರವಾದ ಪೌಷ್ಠಿಕತೆ ಹೆಚ್ಚಿಸುವ ಶುಚಿಯಾದ ರುಚಿಕರವಾದ ಅಡುಗೆ ತಯಾರಿಸಬಹುದು ಎಂಬ ಪ್ರಯತ್ನ ನಡೆಯುತ್ತಿದೆ. ಹೊಸ ವರ್ಷಕ್ಕೆ ಸಿಹಿ ಹಂಚುವುದು ಪದ್ಧತಿ. ಆ ದೃಷ್ಟಿಯಿಂದ ಮಂಡ್ಯ ಜಿಲ್ಲಾ ಪಂಚಾಯತ್, ರಾಷ್ಟ್ರೀಯ ಜೀವನೋಪಾಯ ವಿಷನ್, ಕೃಷಿ ಇಲಾಖೆ ಒಟ್ಟುಗೂಡಿ ಸಾರ್ವಜನಿಕರಿಗೆ ಸೇರಬೇಕು ಎಂಬ ಯೋಚನೆಯಿಂದ ವಿಭಿನ್ನ ಪ್ರಯತ್ನ ಮಾಡಲಾಗಿದೆ ಎಂದು ಹೇಳಿದರು.
ಮಂಡ್ಯ ಜಿಲ್ಲೆ ನೈಸರ್ಗಿಕ ಕೃಷಿ ಪದ್ಧತಿಯತ್ತ ಹೋದಾಗ ಮಾತ್ರ ನಾವು ಸುಸ್ಥಿರ ಅಭಿವೃದ್ಧಿ ಹೊಂದಲು ಸಾಧ್ಯ ಎಂದು ಹೇಳಿದರು.





