ಮೈಸೂರು: ಇಂದು ಹೊಸ ವರ್ಷದ ಸಂಭ್ರಮ ಮನೆ ಮಾಡಿರುವ ಹಿನ್ನೆಲೆಯಲ್ಲಿ ಸಾಂಸ್ಕೃತಿಕ ನಗರಿ ಮೈಸೂರಿನ ದೇವಾಲಯಗಳು ಭಕ್ತರಿಂದ ತುಂಬಿ ತುಳುಕುತ್ತಿವೆ.
ಮೈಸೂರಿನ ಅಗ್ರಹಾರದಲ್ಲಿರುವ 101 ಗಣಪತಿ ದೇವಸ್ಥಾನ, ಗಣಪತಿ ದೇವಸ್ಥಾನ, ಕಾಮ ಕಾಮೇಶ್ವರಿ ದೇವಸ್ಥಾನ, ವಿಜಯನಗರದಲ್ಲಿರುವ ಯೋಗ ನರಸಿಂಹಸ್ವಾಮಿ ದೇವಸ್ಥಾನ, ಇಸ್ಕಾನ್ ದೇವಸ್ಥಾನ, ಗಣಪತಿ ಸಚ್ಚಿದಾನಂದ ಆಶ್ರಮ ಸೇರಿದಂತೆ ಎಲ್ಲಾ ದೇವಾಲಯಗಳಲ್ಲೂ ಭಕ್ತರು ತುಂಬಿ ತುಳುಕುತ್ತಿದ್ದಾರೆ.
ಇಂದು ಬೆಳಿಗ್ಗೆಯಿಂದಲೇ ದೇವಸ್ಥಾನಗಳಿಗೆ ತೆರಳುತ್ತಿರುವ ಭಕ್ತರು ದೇವರ ದರ್ಶನ ಪಡೆದು ಹೊಸ ವರ್ಷದಲ್ಲಿ ಒಳಿತಾಗುವಂತೆ ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ. ದೇವಾಲಯಕ್ಕೆ ಬರುವ ಭಕ್ತರೆಲ್ಲರಿಗೂ ಪ್ರಸಾದ ವ್ಯವಸ್ಥೆ ಮಾಡಲಾಗಿದೆ.
ಈ ಮೂಲಕ ಜನರು ಹೊಸ ವರ್ಷವನ್ನು ಅದ್ಧೂರಿಯಾಗಿ ಬರಮಾಡಿಕೊಂಡಿದ್ದು, ಎಲ್ಲರಿಗೂ ಈ ವರ್ಷ ಒಳಿತನ್ನು ಮಾಡಲಿ ಎಂದು ದೇವರಲ್ಲಿ ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ.





