ಮೈಸೂರು: ನೂತನ ವರ್ಷವನ್ನು ಮೈಸೂರಿನ ವಿಜಯನಗರದಲ್ಲಿರುವ ಯೋಗ ನರಸಿಂಹಸ್ವಾಮಿ ದೇವಾಲಯದಲ್ಲಿ ಭಕ್ತರಿಗೆ ತಿರುಪತಿ ಮಾದರಿ ಲಡ್ಡು ವಿತರಿಸುವ ಮೂಲಕ ಸ್ವಾಗತಿಸಲಾಯಿತು.
2026ನೇ ವರ್ಷದ ಮೊದಲ ದಿನವನ್ನ ಯೋಗನರಸಿಂಹಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಆಚರಣೆ ಮಾಡಲಾಯಿತು.
ಇಂದು ಬೆಳಿಗ್ಗೆ 4 ಗಂಟೆಯಿಂದಲೇ ಭಕ್ತರಿಗೆ ತಿರುಪತಿ ಮಾದರಿಯ ಲಡ್ಡು ವಿತರಣೆ ಮಾಡಲಾಗುತ್ತಿದೆ.
ಮುಂಜಾನೆಯಿಂದಲೇ ಭಕ್ತರು ದೇವಾಲಯಕ್ಕೆ ಆಗಮಿಸಿ ಸರತಿ ಸಾಲಿನಲ್ಲಿ ನಿಂತು ಯೋಗನರಸಿಂಹಸ್ವಾಮಿ ದರ್ಶನ ಪಡೆದರು.





