Mysore
22
overcast clouds

Social Media

ಶನಿವಾರ, 03 ಜನವರಿ 2026
Light
Dark

ಕೋವಿಡ್‌ ಹಗರಣ: ಸರ್ಕಾರಕ್ಕೆ ಅಂತಿಮ ವರದಿ ಸಲ್ಲಿಕೆ

ಬೆಂಗಳೂರು: ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾದ ಕೋವಿಡ್ ಹಗರಣದ ತನಿಖೆಯ ಅಂತಿಮ ವರದಿಯನ್ನು ನಿವೃತ್ತ ನ್ಯಾಯಮೂರ್ತಿ ಮೈಕೆಲ್‌ ಡಿ ಕುನ್ಹಾ ಸರ್ಕಾರಕ್ಕೆ ಸಲ್ಲಿಕೆ ಮಾಡಿದ್ದಾರೆ.

ಮೈಕೆಲ್‌ ಡಿ ಕುನ್ಹಾ ಅವರು, ಸಿಎ ಸಿದ್ದರಾಮಯ್ಯ ಸಮ್ಮುಖದಲ್ಲಿ ಸರ್ಕಾರದ ಮುಖ್ಯಕಾರ್ಯದರ್ಶಿ ಡಾ.ಶಾಲಿನಿ ರಜನೀಶ್‌ ಅವರಿಗೆ ಕೋವಿಡ್‌ ಹಗರಣ ಸಂಬಂಧ ಅಂತಿಮ ವರದಿ ಸಲ್ಲಿಸಿದ್ದಾರೆ.

ಕೊರೊನಾ ವ್ಯಾಪಕವಾಗಿ ಹರಡುತ್ತಿದ್ದ ವೇಳೆ ಔಷಧ ಮತ್ತು ಉಪಕರಣಗಳ ಖರೀದಿಯಲ್ಲಿನ ಭ್ರಷ್ಟಾಚಾರ ಆರೋಪ ಕೇಳಿ ಬಂದಿತ್ತು. ಈ ಕುರಿತು ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ 2023ರಲ್ಲಿ ತನಿಖೆಗೆ ಆದೇಶಿಸಿತ್ತು. ಹೈಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ಜಾನ್‌ ಮೈಕಲ್‌ ಕುನ್ಹಾ ನೇತೃತ್ವದಲ್ಲಿ ತನಿಖೆಗೆ ಆದೇಶ ನೀಡಿತ್ತು.

 

Tags:
error: Content is protected !!