Mysore
22
overcast clouds

Social Media

ಶನಿವಾರ, 03 ಜನವರಿ 2026
Light
Dark

ಹೊಸವರ್ಷ : ಪೊಲೀಸರ ಕಾರ್ಯ ಶ್ಲಾಘಿಸಿದ ಸಿಎಂ

ಬೆಂಗಳೂರು : 2026ರ ಹೊಸವರ್ಷವನ್ನು ಅದ್ದೂರಿಯಾಗಿ ಬರಮಾಡಿಕೊಳ್ಳಲಾಗಿದೆ. ರಾಜ್ಯದಲ್ಲಿ ಯಾವುದೆ ಅಹಿತಕರ ಘಟನೆ ನಡೆಯದೆ ಸುರಕ್ಷಿತವಾಗಿ ಹೊಸ ವರ್ಷಕ್ಕೆ ಕಾಲಿಟ್ಟಿದ್ದೇವೆ.

ಇದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿರುವ ಶ್ಲಾಘಿಸಿರುವ ಸಿಎಂ ಸಿದ್ದರಾಮಯ್ಯ ಪೊಲೀಸರ ಕಾರ್ಯವನ್ನು ಶ್ಲಾಘಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಅವರು, ಅಹಿತಕರ ಘಟನೆಗಳಿಗೆ ಆಸ್ಪದ ನೀಡದೆ, ಸುರಕ್ಷಿತವಾಗಿ ಹಾಗೂ ಅಷ್ಟೇ ಅದ್ಧೂರಿಯಾಗಿ ಹೊಸ ವರ್ಷವನ್ನು ಬರಮಾಡಿಕೊಳ್ಳಲು ನಮ್ಮ ಕರ್ನಾಟಕ ಪೊಲೀಸರು ತೋರಿದ ಶಿಸ್ತು, ಸಮರ್ಪಣೆ ಮತ್ತು ಅವಿಶ್ರಾಂತ ಪ್ರಯತ್ನಗಳು ಶ್ಲಾಘನೀಯ ಎಂದಿದ್ದಾರೆ.

ನಮ್ಮ ಪೊಲೀಸರ ವೃತ್ತಿಪರತೆ ಮತ್ತು ಸಾರ್ವಜನಿಕರ ಸುರಕ್ಷತೆಯೆಡೆಗಿನ ಬದ್ಧತೆಯು ನೈಜ ಸೇವಾ ಮನೋಭಾವದ ದ್ಯೋತಕ. ಪ್ರತಿಯೊಬ್ಬ ಪೊಲೀಸ್ ಸಿಬ್ಬಂದಿ ಮತ್ತು ಅವರ ಕುಟುಂಬಕ್ಕೆ ನನ್ನ ಹೃತ್ಪೂರ್ವಕ ಧನ್ಯವಾದಗಳು. ಹೊಸವರ್ಷವು ಎಲ್ಲ ಕನ್ನಡಿಗರಿಗೂ ಸುಖ, ಸಂತಸ ಮತ್ತು ಸಮೃದ್ಧಿಯನ್ನು ತರಲಿ ಎಂದು ಹಾರೈಸುತ್ತೇನೆ ಎಂದು ಹೇಳಿದ್ದಾರೆ.

 

Tags:
error: Content is protected !!