ಬಳ್ಳಾರಿ : ವಾಲ್ಮೀಕಿ ಬ್ಯಾನರ್ ಅಳವಡಿಕೆ ವಿಚಾರದಲ್ಲಿ ಶಾಸಕ ಜನಾರ್ದನ ರೆಡ್ಡಿ ಮನೆ ಬಳಿ ಗುರುವಾರ ಸಂಜೆ ನಡೆದ ಘರ್ಷಣೆ ಸಂಬಂಧ ಜನಾರ್ದನ ರೆಡ್ಡಿ ಸೇರಿದಂತೆ ಹನ್ನೊಂದು ಮಂದಿ ವಿರುದ್ಧ ಪ್ರಕರಣ ದಾಖಲಾಗಿದೆ.
ಶಾಸಕ ನಾರಾ ಭರತ್ ರೆಡ್ಡಿ ಆಪ್ತ ಚಾನಾಳ್ ಶೇಖರ್ ನೀಡಿದ ದೂರು ಆಧರಿಸಿ ಜರ್ನಾಧನ ರೆಡ್ಡಿ ಅವರನ್ನು ಪ್ರಕರಣದಲ್ಲಿ ಎ1 ಮಾಡಲಾಗಿದೆ. ಸೋಮಶೇಖರ್ ರೆಡ್ಡಿ ಎ2, ಶ್ರೀರಾಮುಲು ಎ3,ಪಾಲಿಕೆ ವಿರೋಧ ಪಕ್ಷದ ನಾಯಕ ಮೋತ್ಕರ್ ಶ್ರೀನಿವಾಸ ಅವರನ್ನು ಎ4 ಮಾಡಲಾಗಿದೆ. ಜ.1 ರಾತ್ರಿ 1 ಗಂಟೆಯಲ್ಲಿ ಈ ಎಫ್‌ಐಆರ್ ದಾಖಲಾಗಿದ್ದು, ಒಟ್ಟು ಹನ್ನೊಂದು ಮಂದಿ ವಿರುದ್ಧ ಬ್ರೂಸ್ ಪೇಟೆ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.





