ಬಳ್ಳಾರಿ: ಬಳ್ಳಾರಿಯಲ್ಲಿ ಬ್ಯಾನರ್ ಕಟ್ಟುವ ವಿಚಾರವಾಗಿ ಗಲಾಟೆ ನಡೆದು ಫೈರಿಂಗ್‌ನಲ್ಲಿ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಖಾಸಗಿ ಗನ್‌ಮ್ಯಾನ್‌ಗಳನ್ನು ಪೊಲೀಸರು ಬಂಧಿಸಿದ್ದಾರೆ.
ಕಾಂಗ್ರೆಸ್ ಶಾಸಕ ಭರತ್ ರೆಡ್ಡಿಯ ಆಪ್ತ ಸತೀಶ್ ರೆಡ್ಡಿ ಅವರ ಇಬ್ಬರು ಖಾಸಗಿ ಗನ್‌ಮ್ಯಾನ್‌ಗಳನ್ನು ಬಳ್ಳಾರಿಯ ಬ್ರೂಸ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಗುರುಚರಣ್ ಸಿಂಗ್ ಹಾಗೂ ಬಲ್ಜಿತ್ ಸಿಂಗ್ ಎಂಬುವವರೇ ಬಂಧಿತ ಆರೋಪಿಗಳಾಗಿದ್ದಾರೆ.
ಗನ್‌ಮ್ಯಾನ್ ಗುರುಚರಣ್ ಸಿಂಗ್ ಗನ್‌ನಿಂದ ಹಾರಿದ ಗುಂಡೇಟಿನಿಂದಲೇ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಬಲಿಯಾಗಿದ್ದಾರೆ ಎನ್ನಲಾಗಿದೆ. ಇಬ್ಬರು ಗನ್‌ಮ್ಯಾನ್‌ಗಳನ್ನು ಬಂಧಿಸಿರುವ ಪೊಲೀಸರು ತನಿಖೆಯನ್ನು ಮತ್ತಷ್ಟು ಚುರುಕುಗೊಳಿಸಿದ್ದಾರೆ.





