Mysore
18
clear sky

Social Media

ಮಂಗಳವಾರ, 06 ಜನವರಿ 2026
Light
Dark

ಹಿರಿಯ ಪತ್ರಕರ್ತ ರಾಜಕುಮಾರ್‌ ಬಾಹುಸಾರ್‌ ಇನ್ನಿಲ್ಲ

ಮೈಸೂರು : ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಹಿರಿಯ ಪತ್ರಕರ್ತ ರಾಜಕುಮಾರ್ ಬಾಹುಸಾರ್(64) ಅವರು ಚಿಕಿತ್ಸೆಗೆ ಸ್ಪಂದಿಸದೆ ಭಾನುವಾರ ಸಂಜೆ ಮೃತಪಟ್ಟಿದ್ದಾರೆ.

ಮೃತರ ಪತ್ನಿ ವೀಣಾ ಅವರು ಎರಡು ವರ್ಷಗಳ ಹಿಂದೆ ಅನಾರೋಗ್ಯದಿಂದ ಮೃತಪಟ್ಟಿದ್ದರು. ಕೆ.ಆರ್.ಆಸ್ಪತ್ರೆಯ ಶವಾಗಾರದಲ್ಲಿ ಸೋಮವಾರ ಬೆಳಗ್ಗೆ ಪಾರ್ಥಿವ ಶರೀರದ ಮರಣೋತ್ತರ ಪರೀಕ್ಷೆಯ ನಂತರ ಅಪರಾಹ್ನ 12 ಗಂಟೆ ನಂತರ ಚಾಮುಂಡಿ ಬೆಟ್ಟದ ತಪ್ಪಲಿನ ಸ್ಮಶಾನದಲ್ಲಿ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ರಾಜಕುಮಾರ್ ಅವರು ಮೈಸೂರು ಮಿತ್ರ, ಸ್ಟಾರ್ ಆಫ್ ಮೈಸೂರ್, ಕನ್ನಡಪ್ರಭ, ಸಂಕ್ರಾಂತಿ, ಸಂಯುಕ್ತ ಕರ್ನಾಟಕ, ರಾಜ್ಯ ಧರ್ಮ, ಜನಮನ ಸೇರಿದಂತೆ ವಿವಿಧ ಪತ್ರಿಕೆಗಳಲ್ಲಿ ೩೦ ವರ್ಷಗಳಿಗೂ ಹೆಚ್ಚು ಕಾಲ ಕಾರ್ಯ ನಿರ್ವಹಿಸಿದ್ದರು.

 

Tags:
error: Content is protected !!