ತುಮಕೂರು: ತುಮಕೂರಿನಲ್ಲಿ 11 ಮಂಗಗಳು ನಿಗೂಢವಾಗಿ ಸಾವನ್ನಪ್ಪಿದ್ದು, ಕಿಡಿಗೇಡಿಗಳು ವಿಷಪ್ರಾಶನ ಮಾಡಿರುವ ಶಂಕೆ ವ್ಯಕ್ತವಾಗಿದೆ.
ದೇವರಾಯನ ದುರ್ಗ ಅರಣ್ಯ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, 2 ದಿನದಲ್ಲಿ 11 ಮಂಗಗಳು ಸಾವನ್ನಪ್ಪವೆ.
ಸ್ಥಳೀಯರು ನೀಡಿದ ಮಾಹಿತಿ ಆಧರಿಸಿ ಅರಣ್ಯಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ಮಂಗಗಳು ಯಾವುದೇ ಸೋಂಕು ಅಥವಾ ಕಾಯಿಲೆಯಿಂದ ಮೃತಪಟ್ಟಿಲ್ಲ ಎಂದು ತಿಳಿದು ಬಂದಿದೆ.
ಘಟನೆ ಸಂಬಂಧ ತುಮಕೂರು ಪ್ರಾದೇಶಿಕ ವಲಯದ ಅರಣ್ಯಾಧಿಕಾರಿಗಳು ಪ್ರಕರಣ ದಾಖಲಿಸಿಕೊಂಡಿದ್ದು, ಮಂಗಗಳ ಸಾವಿನ ಬಗ್ಗೆ ಹಲವು ಅನುಮಾನ ವ್ಯಕ್ತವಾಗಿದೆ.
ಆಹಾರ ಪದಾರ್ಥಗಳಲ್ಲಿ ವಿಷ ಬೆರೆಸಿ ಕೋತಿಗಳಿಗೆ ಹಾಕಿದ್ರಾ ಎಂಬ ಅನುಮಾನ ಮೂಡಿದ್ದು, ಮಾದರಿಗಳನ್ನು ಬೆಂಗಳೂರಿನ ಪಶು ವೈದ್ಯಕೀಯ ವಿದ್ಯಾಲಯಕ್ಕೆ ರವಾನೆ ಮಾಡಲಾಗಿದೆ.





