ಗೋಣಿಕೊಪ್ಪ: ಲಾರಿ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ವಿರಾಜಪೇಟೆ ರಸ್ತೆಯ ಹಾತೂರು ಸಮೀಪದಲ್ಲಿ ನಡೆದಿದೆ.
ಬೈಕ್ ಸವಾರ ಬೆಕ್ಕೆಸುಡ್ಲೂರು ನಿವಾಸಿ ಸುಳ್ಳಿಮಾಡ ಭಜನ್ ದೇವಯ್ಯ ಎಂಬುವವರೇ ಅಪಘಾತದಲ್ಲಿ ಸಾವನ್ನಪ್ಪಿರುವ ದುರ್ದೈವಿಯಾಗಿದ್ದಾರೆ.
ಕೊಡಗಿನಿಂದ ಕೇರಳಕ್ಕೆ ಕೊಡಗು ರೈಡರ್ಸ್ ಕ್ಲಬ್ ವತಿಯಿಂದ ಆಯೋಜಿಸಿದ್ದ ರೈಡ್‌ನಲ್ಲಿ ಪಾಲ್ಗೊಂಡು ಕೇರಳದಿಂದ ಭಾನುವಾರ ಸಂಜೆ ಹಿಂತಿರುಗುತ್ತಿದ್ದಾಗ ರಾತ್ರಿ ಸಮಯದಲ್ಲಿ ಹಾತೂರಿನ ವನಭದ್ರಕಾಳಿ ದೇವಸ್ಥಾನದ ಸಮೀಪ ಕಾರೊಂದನ್ನು ಓವರ್ ಟೇಕ್ ಮಾಡಲು ಹೋಗಿ ಈ ಘಟನೆ ಸಂಭವಿಸಿದೆ.
ಈ ಸಂಬಂಧ ಗೋಣಿಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.





