Mysore
23
scattered clouds

Social Media

ಶುಕ್ರವಾರ, 09 ಜನವರಿ 2026
Light
Dark

112 ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ; ಇಬ್ಬರ ಬಂಧನ

ದೊಡ್ಡ ಕವಲಂದೆ  : 112 ತುರ್ತು ವಾಹನ ಪೊಲೀಸ್ ಸಿಬ್ಬಂದಿಗಳ ಮೇಲೆ ಹಲ್ಲೆ ನಡೆಸಿರುವ ಘಟನೆ ನಂಜನಗೂಡು ತಾಲ್ಲೂಕಿನ ಕವಲಂದೆ ಪೊಲೀಸ್ ಠಾಣಾ ವ್ಯಾಪ್ತಿಯ ಚಿನ್ನದಗುಡಿ ಹುಂಡಿ ಗ್ರಾಮದಲ್ಲಿ ನಡೆದಿದೆ.

ಚಿನ್ನದಗುಡಿಹುಂಡಿ ಗ್ರಾಮದ ಸ್ವಾಮಿ ಎಂಬವರು ಗ್ರಾಮದಲ್ಲಿ ಗಲಾಟೆ ನಡೆಯುತ್ತಿರುವ ಬಗ್ಗೆ 112 ಕಂಟ್ರೋಲ್ ನಂಬರ್‌ಗೆ ಕರೆ ಮಾಡಿ, ದೂರು ಸಲ್ಲಿಸಿದ್ದರು. ಕೂಡಲೇ ಕವಲಂದೆ ಮತ್ತು ಬಿಳಿಗೆರೆ ಪೊಲೀಸ್ ಠಾಣೆಯ 112 ತುರ್ತು ವಾಹನದ ಪೊಲೀಸ್ ಸಿಬ್ಬಂದಿ ಗ್ರಾಮಕ್ಕೆ ತೆರಳಿದ್ದರು.

ಪೊಲೀಸರು ಮಧ್ಯೆ ಪ್ರವೇಶಿಸಿ ಜಗಳವನ್ನು ಬಿಡಿಸುತ್ತಿದ್ದ ವೇಳೆ ರವಿ ಮತ್ತು ಕಿಶೋರ್ ಎಂಬವರು ಪೊಲೀಸರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ, ಹಲ್ಲೆ ನಡೆಸಿದ್ದಾರೆ. ಸಮವಸ್ತ್ರದಲ್ಲಿದ್ದ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿ ಹಲ್ಲೆ ನಡೆಸಿದ ಆರೋಪದ ಮೇಲೆ ಅವರ ವಿರುದ್ಧ ಪ್ರಕರಣವನ್ನು ದಾಖಲಿಸಿಕೊಂಡು, ಹಲ್ಲೆ ನಡೆಸಿದ ರವಿ ಮತ್ತು ಕಿಶೋರ್ ಅವರನ್ನು ಪೊಲೀಸರು ಬಂಽಸಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಈ ಸಂಬಂಧ ಕವಲಂದೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

 

 

Tags:
error: Content is protected !!