Mysore
16
scattered clouds

Social Media

ಶುಕ್ರವಾರ, 09 ಜನವರಿ 2026
Light
Dark

ಆದಷ್ಟು ಬೇಗ ಬಿಜೆಪಿ ಜೊತೆ ಜೆಡಿಎಸ್‌ ವಿಲೀನ: ಡಿಸಿಎಂ ಡಿ.ಕೆ.ಶಿವಕುಮಾರ್‌ ಭವಿಷ್ಯ

ಬೆಂಗಳೂರು: ಆದಷ್ಟು ಬೇಗ ಬಿಜೆಪಿ ಜೊತೆ ಜೆಡಿಎಸ್‌ ವಿಲೀನ ಆಗಬಹುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಭವಿಷ್ಯ ನುಡಿದಿದ್ದಾರೆ.

ಈ ಬಗ್ಗೆ ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆಡಿಎಸ್‌ಗೆ ಸಿದ್ಧಾಂತವಿಲ್ಲ. ಅವರದೊಂದು ನೀತಿ ಇಲ್ಲ. ಆದಷ್ಟು ಬೇಗ ಬಿಜೆಪಿ ಜೊತೆ ಜೆಡಿಎಸ್‌ ವಿಲೀನ ಆಗುವ ಸಾಧ್ಯತೆ ಇದೆ ಎಂದು ಭವಿಷ್ಯ ನುಡಿದರು.

ಇನ್ನು ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ವಿರುದ್ಧ ಕಿಡಿಕಾರಿದ ಡಿಕೆಶಿ ಅವರು, ಮಿಸ್ಟರ್‌ ಕುಮಾರಸ್ವಾಮಿ ರಾಜಕೀಯದಲ್ಲಿ ನಿಮಗಿಂತ ನನಗೆ ಅನುಭವ ಹೆಚ್ಚಿದೆ. ನಾನು ಸಿಎಂ ಆಗದೇ ಇರಬಹುದು. ಸುದೀರ್ಘ ಕಾಲ ಸಚಿವನಾಗಿ ಕೆಲಸ ಮಾಡಿದ್ದೇನೆ. ಹೀಗಾಗಿ ಆಡಳಿತದಲ್ಲಿ ಕುಮಾರಸ್ವಾಮಿಗಿಂತ ನನಗೆ ಹೆಚ್ಚು ಅನುಭವವಿದೆ ಎಂದು ಹೇಳಿದರು.

Tags:
error: Content is protected !!