ನವದೆಹಲಿ: 2027ರ ಜನಗಣತಿಯ ಮೊದಲ ಹಂತದ ಮನೆ ಪಟ್ಟಿ ಕಾರ್ಯ ಈ ವರ್ಷದ ಏಪ್ರಿಲ್ 1 ರಿಂದ ಸೆಪ್ಟೆಂಬರ್.30ರವರೆಗೆ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ನಡೆಯಲಿದೆ.
ಈ ಕುರಿತು ಕೇಂದ್ರ ಗೃಹ ಸಚಿವಾಲಯ ಅಧಿಸೂಚನೆ ಹೊರಡಿಸಿದ್ದು, 30 ದಿನಗಳ ಮನೆ ಪಟ್ಟಿ ಕಾರ್ಯಾಚರಣೆ ಪ್ರಾರಂಭವಾಗುವ ಮೊದಲು 15 ದಿನಗಳ ಅವಧಿಯಲ್ಲಿ ಸ್ವಯಂ ಎಣಿಕೆ ನಡೆಸುವ ಆಯ್ಕೆಯೂ ಇರುತ್ತದೆ ಎಂದು ತಿಳಿಸಲಾಗಿದೆ.
ಇನ್ನು ಕಳೆದ ವರ್ಷ ಏಪ್ರಿಲ್.30ರಂದು ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ರಾಜಕೀಯ ವ್ಯವಹಾರಗಳ ಸಂಪುಟ ಸಮಿತಿಯು ಮುಂಬರುವ ಜನಗಣತಿಯಲ್ಲಿ ಜಾತಿ ಗಣತಿಯನ್ನು ಸೇರಿಸುವ ನಿರ್ಧಾರವನ್ನು ತೆಗೆದುಕೊಂಡಿತ್ತು.





