Mysore
15
overcast clouds

Social Media

ಶನಿವಾರ, 10 ಜನವರಿ 2026
Light
Dark

ಬೀದಿಬದಿ ವ್ಯಾಪಾರಿಗಳ ವಲಯ ನಿರ್ಮಿಸಲು ಚಿಂತನೆ : ಸಂಸದ ಯದುವೀರ್‌

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನ ಸ್ವಚ್ಛತೆಯನ್ನು ಕಾಪಾಡುವ ನಿಟ್ಟಿನಲ್ಲಿ ನಗರದಲ್ಲಿ ಬೀದಿಬದಿ ವ್ಯಾಪಾರಿಗಳ ವಲಯ ನಿರ್ಮಿಸಲು ಆದ್ಯತೆ ನೀಡಲಾಗುವುದು ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಸೂಚನೆ ನೀಡಿದ್ದಾರೆ.

ಮೈಸೂರಿನಲ್ಲಿ ನಗರ ಪ್ರದಕ್ಷಿಣೆ ನಡೆಸಿದ ಸಂಸದ ಯದುವೀರ್ ಹಲವಾರು ಪ್ರದೇಶಗಳಲ್ಲಿ ಬೀದಿ ಬದಿ ವ್ಯಾಪಾರಿಗಳೊಂದಿಗೆ ಸಂವಾದ ನಡೆಸಿದರು. ಬೀದಿ ವ್ಯಾಪಾರಿಗಳ ವಲಯಗಳು ಮುಖ್ಯವಾಗಿದ್ದು, ಇದನ್ನು ನಿರ್ಮಿಸಲು ನಾನು ಒತ್ತು ನೀಡುತ್ತೇನೆ, ಶೀಘ್ರದಲ್ಲೇ ಇತರ ಪ್ರದೇಶಗಳಿಗೂ ಭೇಟಿ ನೀಡಿ ಪರಿಶೀಲಿಸಲಾಗುವುದು ಎಂದು ತಿಳಿಸಿದರು. ಇದೇ ವೇಳೆ ಬೀದಿ ಬದಿ ವ್ಯಾಪಾರಿಗಳ ಜೊತೆ ಸಂಸದ ಯದುವೀರ್ ಮಾತುಕತೆ ನಡೆಸಿ ಅವರ ಸಮಸ್ಯೆಗಳ ಬಗ್ಗೆ ಮಾಹಿತಿ ಪಡೆದರು.

Tags:
error: Content is protected !!