Mysore
31
clear sky

Social Media

ಮಂಗಳವಾರ, 03 ಮಾರ್ಚ್ 2026
Light
Dark

ನಾಡಬಾಂಬ್‌ ಸ್ಫೋಟಗೊಂಡು ಹಸುವಿನ ಬಾಯಿ ಛಿದ್ರ ಪ್ರಕರಣ: ಮೂವರು ಆರೋಪಿಗಳ ಬಂಧನ

ರಾಮನಗರ: ನಾಡಬಾಂಬ್‌ ಸ್ಫೋಟಗೊಂಡು ಹಸುವಿನ ಬಾಯಿ ಛಿದ್ರಗೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಡುಹಂದಿ ಬೇಟೆಗಾಗಿ ನಾಡಬಾಂಬ್‌ ಇಟ್ಟಿದ್ದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ.

ಕೃಷ್ಣಮೂರ್ತಿ, ಶಿವಕುಮಾರ್‌, ಶಿವನಪ್ಪ ಎಂಬುವವರೇ ಬಂಧಿತ ಆರೋಪಿಗಳಾಗಿದ್ದಾರೆ.

ಜನವರಿ.3ರಂದು ಈ ಘಟನೆ ನಡೆದಿತ್ತು. ರೈತ ಶಿವನೇಗೌಡ ಎಂಬುವವರು ತಮ್ಮ ಹಸುವನ್ನು ಮೇಯಲು ಬಿಟ್ಟಿದ್ದಾಗ ಬಾಯಿಗೆ ನಾಡಬಾಂಬ್‌ ಸಿಲುಕಿ ಸ್ಫೋಟಗೊಂಡು ಹಸು ಬಾಯಿ ಛಿದ್ರವಾಗಿತ್ತು. ಎರಡು ದಿನಗಳ ಬಳಿಕ ಹಸು ಸಾವನ್ನಪ್ಪಿತ್ತು.

ಈ ಸಂಬಂಧ ಕೋಡಿಹಳ್ಳಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದ ಪೊಲೀಸರು, ಕಾಡು ಪ್ರಾಣಿಗಳ ಬೇಟೆಗೆ ನಾಡಬಾಂಬ್‌ ಇಟ್ಟಿದ್ದ ಮೂವರು ಆರೋಪಿಗಳನ್ನು ಬಂಧಿಸಿ ಎರಡು ಜೀವಂತ ನಾಡಬಾಂಬ್‌ಗಳನ್ನು ವಶಕ್ಕೆ ಪಡೆದಿದ್ದಾರೆ.

 

Tags:
error: Content is protected !!