ಒಡಿಶಾ: ಇಲ್ಲಿನ ರೂರ್ಕೆಲಾ ವಾಯುನೆಲೆಯ ಬಳಿಯ ಜಗದಾ ಬ್ಲಾಕ್ ಬಳಿ ಒಂಭತ್ತು ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಸಣ್ಣ ವಿಮಾನವೊಂದು ಅಪಘಾತಕ್ಕೀಡಾಗಿದೆ.
ಭುವನೇಶ್ವರಕ್ಕೆ ಟೇಕ್ ಆಫ್ ಆಗಲು ಪ್ರಯತ್ನಿಸುತ್ತಿದ್ದಾಗ ವಿಮಾನ ಅಪಘಾತಕ್ಕೀಡಾಗಿದೆ. ವಿಮಾನವು ಟೇಕ್ ಆಫ್ ಆದ ಕೆಲವೇ ಕ್ಷಣಗಳಲ್ಲಿ ತೊಂದರೆಗೆ ಸಿಲುಕಿ ಪತನಗೊಂಡಿದೆ.
ಇಲ್ಲಿಯವರೆಗೆ ಯಾವುದೇ ಸಾವು-ನೋವುಗಳ ಬಗ್ಗೆ ವರದಿಯಾಗಿಲ್ಲ. ಆದರೂ ಕೆಲ ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ವಿಮಾನ ಹೇಗೆ ಮತ್ತು ಯಾವ ಸಂದರ್ಭದಲ್ಲಿ ಅಪಘಾತಕ್ಕೀಡಾಯಿತು ಎಂಬುದನ್ನು ನಿರ್ಧರಿಸಲು ಅಧಿಕಾರಿಗಳು ತನಿಖೆ ಪ್ರಕ್ರಿಯೆ ಪ್ರಾರಂಭಿಸಿದ್ದಾರೆ.





