Mysore
22
mist

Social Media

ಭಾನುವಾರ, 11 ಜನವರಿ 2026
Light
Dark

ಇರಾನ್ ಆರ್ಥಿಕ ಬಿಕ್ಕಟ್ಟು | 13ನೇ ದಿನಕ್ಕೆ ಕಾಲಿಟ್ಟ ಪ್ರತಿಭಟನೆ ; 200ಕ್ಕೂ ಹೆಚ್ಚು ಮಂದಿ ಬಲಿ

ಟೆಹ್ರಾನ್ : ಇರಾನ್ ಸರ್ಕಾರದ ವಿರುದ್ದ ಜನಾಕ್ರೋಶ ಭುಗಿಲೆದಿದ್ದು, ಸುಮಾರು 13 ದಿನಗಳಿಂದ ಜನಖರು ಬೀದಿಗಿಳಿದು ಉಗ್ರ ಹೋರಾಟ ನಡೆಸುತ್ತಿದ್ದಾರೆ. ಪ್ರತಿಭಟನೆ ಹತ್ತಿಕ್ಕಲು ಇರಾನ್ ಸರ್ಕಾರ ದೇಶದಾದ್ಯಂತ ಇಂಟರ್ನೆಟ್ ಸಂಪರ್ಕವನ್ನು ಕಡಿತಗೊಳಿಸಿದರೂ ಉದ್ವಿಗ್ನತೆ ತಣ್ಣಗಾಗಿಲ್ಲ.

ಭದ್ರತಾ ಪಡೆಗಳು ಪ್ರತಿಭಟನಾಕಾರರ ಮೇಲೆ ನಡೆಸಿದ ಗುಂಡಿನ ದಾಳಿಯಿಂದ ಪರಿಸ್ಥಿತಿ ಮತ್ತಷ್ಟು ಭೀಕರವಾಗಿದ್ದು, ಸಾವಿನ ಸಂಖ್ಯೆ ಹೆಚ್ಚುತ್ತಿರುವ ವರದಿಗಳು ಹೊರಬರುತ್ತಿವೆ.

ಸ್ಥಳೀಯ ವರದಿಗಳ ಪ್ರಕಾರ, ರಾಜಧಾನಿ ಟೆಹ್ರಾನ್‌ನ ವಿವಿಧ ಆಸ್ಪತ್ರೆಗಳಲ್ಲಿ ಕನಿಷ್ಠ 200ಕ್ಕೂ ಹೆಚ್ಚು ಪ್ರತಿಭಟನಾಕಾರರು ಮೃತಪಟ್ಟಿದ್ದಾರೆ. ಗುಂಡಿನ ದಾಳಿಯೇ ಹೆಚ್ಚಿನ ಸಾವುಗಳಿಗೆ ಕಾರಣವಾಗಿದೆ ಎಂದು ಹೇಳಲಾಗುತ್ತಿದೆ.
ಉತ್ತರ ಟೆಹ್ರಾನ್‌ನಲ್ಲಿ ನಡೆದ ಪ್ರತಿಭಟನೆಯ ವೇಳೆ ಭದ್ರತಾ ಪಡೆಗಳು ಏಕಾಏಕಿ ಗುಂಡಿನ ಮಳೆ ಸುರಿಸಿದ್ದು, 30ಕ್ಕೂ ಹೆಚ್ಚು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆಂದು ಹೇಳಲಾಗುತ್ತಿದೆ.

ಪ್ರತಿಭಟನೆ ವ್ಯಾಪಕವಾಗುತ್ತಿದ್ದಂತೆ, ಸರ್ಕಾರ ದೇಶಾದ್ಯಂತ ಇಂಟರ್ನೆಟ್ ಮತ್ತು ದೂರವಾಣಿ ಸಂಪರ್ಕವನ್ನು ಸ್ಥಗಿತಗೊಳಿಸಲಾಗಿದೆ. ಆದರೂ ಹೋರಾಟಗಳು ಇನ್ನೂ ಮುಂದುವರಿದಿವೆ ಎಂದು ತಿಳಿದುಬಂದಿದೆ.

ಆರ್ಥಿಕತೆ ಕುಸಿತದಿಂದಾಗಿ ಡಿ.28ರಂದು ತೆಹ್ರಾನ್‌ನಲ್ಲಿ ಆರಂಭವಾದ ಮುಷ್ಕರ ತೀವ್ರ ಸ್ವರೂಪ ಪಡೆದುಕೊಂಡಿದೆ. ಪ್ರತಿಭಟನಾಕಾರರು ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸುತ್ತಿದ್ದು, ‘ಸರ್ವಾಧಿಕಾರಿಗೆ ಸಾವಾಗಲಿ’ ಹಾಗೂ ಖಮೇನಿ ನಾಶವಾಗಲಲಿ ಎಂದು ಘೋಷಣೆಗಳನ್ನು ಕೂಗುತ್ತಿದ್ದಾರೆ.

ಈ ನಡುವೆ ಇರಾನ್ ಪ್ರತಿಭಟನಾಕಾರರನನ್ನು ಹಿಂಸಾತ್ಮಕವಾಗಿ ಕೊಂದರೆ ಅಮೆರಿಕ ಮಧ್ಯಪ್ರವೇಶಿಸಿ ಅವರ ರಕ್ಷಣೆಗೆ ಮುಂದಾಗಲಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಹೇಳಿಕೆಯನ್ನು ನೀಡಿದ್ದು, ಯುದ್ದಕ್ಕೆ ಸಿದ್ದ ಎಂಬ ಸಂದೇಶ ನೀಡಿದ್ದಾರೆ.

Tags:
error: Content is protected !!