Mysore
19
broken clouds

Social Media

ಭಾನುವಾರ, 11 ಜನವರಿ 2026
Light
Dark

ಬಂಗಾಳಕೊಲ್ಲಿಯಲ್ಲಿ ಮತ್ತೆ ವಾಯುಭಾರ ಕುಸಿತ: ಮುಂದಿನ 24 ಗಂಟೆ ಶೀತಗಾಳಿ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಮತ್ತೆ ವಾಯುಭಾರ ಕುಸಿತವಾಗಿದ್ದು, ರಾಜ್ಯದಲ್ಲಿ ಮುಂದಿನ 24 ಗಂಟೆಯಲ್ಲಿ ಶೀತಗಾಳಿ ಬೀಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಬೆಂಗಳೂರಿನಲ್ಲಿ ತುಂತುರು ಮಳೆಯಾಗಿದ್ದು, ಹಿತವಾದ ಹವಾಮಾನ ಇದೆ. ಬಂಗಾಳಕೊಲ್ಲಿಯಲ್ಲಿ ತೀವ್ರ ವಾಯುಭಾರ ಕುಸಿತವಾಗಿದ್ದು, ಮುಂದಿನ 24 ಗಂಟೆಗಳಲ್ಲಿ ಕರ್ನಾಟಕದ ಒಳನಾಡಿದ ಕೆಲವು ಭಾಗಗಳಲ್ಲಿ ಶೀತಗಾಳಿ ಬೀಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.

ಕರ್ನಾಟಕದ ಒಳನಾಡಿನ ಕೆಲವು ಸ್ಥಳಗಳಲ್ಲಿ ಕನಿಷ್ಠ ತಾಪಮಾನವು ಮೂರರಿಂದ ಆರು ಡಿಗ್ರಿ ಸೆಲ್ಸಿಯಸ್‌ಗಿಂತ ಕಡಿಮೆಯಿದ್ದರೆ, ಇನ್ನು ಕೆಲ ಪ್ರದೇಶಗಳಲ್ಲಿ ಮಂಜು ಕವಿದ ವಾತಾವರಣವಿರಲಿದೆ.

ಕಳೆದ 24 ಗಂಟೆಗಳಲ್ಲಿ ವಿಜಯಪುರದಲ್ಲಿ ಶೀತಗಾಳಿ ವಾತಾವರಣ ಕಂಡುಬಂದಿದೆ. ಈ ಮಧ್ಯೆ ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ತೀವ್ರ ವಾಯುಭಾರ ಕುಸಿತವು ದುರ್ಬಲಗೊಂಡು ಉತ್ತರ ಶ್ರೀಲಂಕಾದ ಕರಾವಳಿಯನ್ನು ದಾಟುವ ಸಾಧ್ಯತೆಯಿದೆ ಎಂದು ಪ್ರಾದೇಶಿಕ ಹವಾಮಾನ ಕೇಂದ್ರ ತಿಳಿಸಿದೆ.

Tags:
error: Content is protected !!