Mysore
19
broken clouds

Social Media

ಭಾನುವಾರ, 11 ಜನವರಿ 2026
Light
Dark

ದ್ವೇಷ ಭಾಷಣ ಮಸೂದೆ: ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

cm siddaramaiah

ಮಂಗಳೂರು: ದ್ವೇಷ ಭಾಷಣ ಮಸೂದೆಯನ್ನು ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಇದನ್ನು ವಾಪಸ್ಸು ಕಳಿಸಿಲ್ಲ, ತಿರಸ್ಕರಿಸಿಲ್ಲ ಅಥವಾ ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಈ ಕುರಿತು ಮಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಬಳ್ಳಾರಿಯಿಂದ ಬಿಜೆಪಿ ಪಾದಯಾತ್ರೆ ಮಾಡುವ ಕುರಿತು ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿ ನಾವು ಹಿಂದೆ ಪಾದಯಾತ್ರೆ ಮಾಡಿದ್ದು, ಬಳ್ಳಾರಿಯಲ್ಲಿ ಕಾನೂನು ಬಾಹಿರ ಗಣಿಗಾರಿಕೆ ಮಾಡುತ್ತಿರುವ ಬಗ್ಗೆ ವಿಧಾನಸಭೆಯಲ್ಲಿ ಚರ್ಚೆ ಮಾಡಿದಾಗ ರೆಡ್ಡಿ ಸಹೋದರರು ಹಾಗೂ ಯಡಿಯೂರಪ್ಪ ಅವರು ಸವಾಲು ಹಾಕಿದ್ದರು. ಅದಕ್ಕಾಗಿ ಪಾದಯಾತ್ರೆ ಕೈಗೊಳ್ಳಲಾಯಿತು. ಇವರು ಪಾದಯಾತ್ರೆ ಏಕೆ ಮಾಡಬೇಕು ಎಂದು ಪ್ರಶ್ನಿಸಿದರು.

ಬಳ್ಳಾರಿಯಲ್ಲಿ ಮಹರ್ಷಿ ವಾಲ್ಮೀಕಿ ಪ್ರತಿಮೆ ಉದ್ಘಾಟನೆ ಬಗ್ಗೆ ಹಾಕಿದ್ದ ಬ್ಯಾನರನ್ನು ತೆಗೆಯಬೇಕಾದ ಅಗತ್ಯವೇನಿತ್ತು? ಅದನ್ನು ತೆಗೆದದ್ದೆ ಘಟನೆಗೆ ಪ್ರಚೋದನೆ ಆಯಿತು. ಜನಾರ್ದನ ರೆಡ್ಡಿ, ಶ್ರೀರಾಮುಲು ಅವರು ಸ್ಥಾನ ಕಳೆದುಕೊಂಡಿದ್ದರಿಂದ ಅಸೂಯೆಯಿಂದ ನಡೆದುಕೊಳ್ಳುತ್ತಿದ್ದಾರೆ ಎಂದರು.

ಇನ್ನು ಮುಂದುವರಿದು ಮಾತನಾಡಿದ ಅವರು, ಮುಖ್ಯಮಂತ್ರಿ ಕುರ್ಚಿ ಬಗ್ಗೆ ಕಾಳಗವೇ ಇಲ್ಲ. ಇದೆಲ್ಲಾ ಮಾಧ್ಯಮಗಳ ಸೃಷ್ಟಿ ಎಂದು ಹೇಳಿದರು.

Tags:
error: Content is protected !!