Mysore
22
overcast clouds

Social Media

ಭಾನುವಾರ, 02 ಆಗಸ್ಟ್ 2026
Light
Dark

ಕರೂರು ಕಾಲ್ತುಳಿತ ದುರಂತ ಪ್ರಕರಣ: ಸಿಬಿಐ ಎದುರು ವಿಚಾರಣೆಗೆ ಹಾಜರಾದ ವಿಜಯ್‌

ತಮಿಳುನಾಡು: ಕರೂರು ಕಾಲ್ತುಳಿತ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಹಾಗೂ ತಮಿಳಿಗ ವೆಟ್ರಿ ಕಳಗಂ ಮುಖ್ಯಸ್ಥ ವಿಜಯ್‌ ಇಂದು ನವದೆಹಲಿಯಲ್ಲಿ ಸಿಬಿಐ ಮುಂದೆ ಹಾಜರಾದರು.

ಕಳೆದ ವರ್ಷ ನಡೆದ ಕಾಲ್ತುಳಿತದ ತನಿಖೆಯ ಭಾಗವಾಗಿ ವಿಜಯ್‌ ಅವರಿಗೆ ಸಿಬಿಐ ಸಮನ್ಸ್‌ ಜಾರಿ ಮಾಡಿತ್ತು. ಅಕ್ಟೋಬರ್.‌2025ರಲ್ಲಿ ಸುಪ್ರೀಂಕೋರ್ಟ್‌ ಈ ಘಟನೆಯ ಬಗ್ಗೆ ಸಿಬಿಐ ತನಿಖೆಗೆ ಆದೇಶ ನೀಡಿತು.

ತಮಿಳುನಾಡಿನಲ್ಲಿ ನಡೆದ ರಾಜಕೀಯ ರ್ಯಾಲಿಯಲ್ಲಿ ಸಂಭವಿಸಿದ ಭೀಕರ ಕಾಲ್ತುಳಿತದಲ್ಲಿ 41 ಜನರು ಸಾವನ್ನಪ್ಪಿದ್ದ ಸುಮಾರು ನಾಲ್ಕು ತಿಂಗಳ ನಂತರ ನಟ ವಿಜಯ್‌ ಅವರು ಇಂದು ದೆಹಲಿಯಲ್ಲಿ ಕೇಂದ್ರ ತನಿಖಾ ದಳದಿಂದ ವಿಚಾರಣೆಯನ್ನು ಎದುರಿಸಿದ್ದಾರೆ.

Tags:
error: Content is protected !!