ಬೆಂಗಳೂರು: ರಾಜ್ಯದಲ್ಲಿ ಸಿಎಂ ಕುರ್ಚಿ ಕಿತ್ತಾಟ, ನಾಯಕತ್ವ ಬದಲಾವಣೆ ವಿಚಾರ ತಣ್ಣಗಾಗಿರುವ ಬೆನ್ನಲ್ಲೇ ಇಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ.
ಬೆಂಗಳೂರಿನ ನಿವಾಸದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾದ ಡಿಸಿಎಂ ಡಿ.ಕೆ.ಶಿವಕುಮಾರ್ ಸುಮಾರು 45 ನಿಮಿಷಗಳ ಕಾಲ ಚರ್ಚಿಸಿದ್ದಾರೆ ಎನ್ನಲಾಗಿದೆ. ರಾಜ್ಯ ರಾಜಕೀಯದ ಬಗ್ಗೆ ಖರ್ಗೆ ಜೊತೆ ಸಮಾಲೋಚನೆ ನಡೆಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.





