ಬೀದರ್: ನಮ್ಮ ತಂದೆ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ವೈದ್ಯರು ಸತತವಾಗಿ ಚಿಕಿತ್ಸೆ ನೀಡುತ್ತಿದ್ದಾರೆ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ಮಾಹಿತಿ ನೀಡಿದ್ದಾರೆ.
ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸದ್ಯ ಸ್ವಲ್ಪಮಟ್ಟಿಗೆ ಆರೋಗ್ಯ ಸ್ಥಿರವಾಗಿದೆ. ಬಿಪಿ ಮತ್ತು ಪಲ್ಸ್ ರೇಟ್ ಕಡಿಮೆಯಾಗಿ, ಸ್ಥಿತಿ ಗಂಭೀರವಾಗಿದೆ. ಆದರೆ ಮನೆಯಲ್ಲೇ ಕೊನೆಯುಸಿರೆಳೆಯಬೇಕು ಎಂಬುದು ತಂದೆಯ ಆಸೆ. ಹೀಗಾಗಿ ನಾವು ಅವರನ್ನು ಆಸ್ಪತ್ರೆಯಿಂದ ಮನೆಗೆ ಶಿಫ್ಟ್ ಮಾಡಿದ್ದೇವೆ. ಆಕ್ಸಿಜನ್ ಮೇಲೆ ವೈದ್ಯರು ಸತತವಾಗಿ ಚಿಕಿತ್ಸೆ ನೀಡುತ್ತಿದ್ದಾರೆ ಎಂದು ತಿಳಿಸಿದರು.
ನಾನು ನಮ್ಮ ತಂದೆಯ ಆರೋಗ್ಯದ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರಿಗೆ ಮಾಹಿತಿ ನೀಡಿದ್ದೇನೆ. ನಮ್ಮ ತಂದೆ ಭೀಮಣ್ಣ ಖಂಡ್ರೆ ಶಿಕ್ಷಣ, ಧಾರ್ಮಿಕ, ಸಹಕಾರ, ಸಾಮಾಜಿಕ ಕ್ಷೇತ್ರದಲ್ಲಿ ಸಾಧನೆ ಮಾಡಿದ್ದಾರೆ ಎಂದು ತಂದೆಯ ಸಾಧನೆ ಬಗ್ಗೆ ನೆನೆದು ಭಾವುಕರಾಗಿದ್ದಾರೆ.





