ಮೈಸೂರು ತಾಲ್ಲೂಕಿನ ಧನಗಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ ಕೆಂಚಲಗೂಡು ಗ್ರಾಮದಲ್ಲಿ ಕರ್ನಾಟಕ ಗೃಹ ಮಂಡಳಿ(ಕೆಎಚ್‌ಬಿ)ಯಿಂದ ನಿರ್ಮಿಸಿರುವ ಬಡಾವಣೆಯಲ್ಲಿ ನೀರು, ರಸ್ತೆ ಮೊದಲಾದ ಮೂಲ ಸೌಕರ್ಯಗಳಿಲ್ಲದೇ ಇಲ್ಲಿನ ನಿವಾಸಿಗಳಿಗೆ ತೀವ್ರ ತೊಂದರೆಯಾಗಿದೆ.
ಇಲ್ಲಿ ೮೦ಕ್ಕೂ ಹೆಚ್ಚು ಮನೆಗಳಿದ್ದು, ಬಡಾವಣೆ ನಿರ್ಮಾಣವಾದ ನಂತರ ಕೆಹೆಚ್‌ಬಿಯವರು ಧನಗಳ್ಳಿ ಗ್ರಾಪಂಗೆ ಹಸ್ತಾಂತರಿಸಿದ್ದು, ಗ್ರಾಮ ಪಂಚಾಯಿತಿಯವರು ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಿಲ್ಲ. ರಸ್ತೆ ಯ ಮೇಲೆ ಆಳೆತ್ತರದ ಗಿಡಗಳು ಬೆಳೆದಿದ್ದು, ವಿಷಜಂತುಗಳ ಆವಾಸ ಸ್ಥಾನವಾಗಿದ್ದು, ಜನರು ರಾತ್ರಿಯ ವೇಳೆ ಮನೆಯಿಂದ ಹೊರಬರಲು ಹೆದರುತ್ತಿದ್ದಾರೆ. ಚರಂಡಿಗಳು ಹೂಳು ತುಂಬಿದ್ದು, ಸೊಳ್ಳೆ, ನೊಣಗಳ ಹಾವಳಿ ಮಿತಿ ಮೀರಿದೆ. ರಸ್ತೆಯ ಮೇಲೆ ಬೆಳೆದಿರುವ ಗಿಡಗಳನ್ನು ತೆರವುಗೊಳಿಸಬೇಕು, ನೀರಿನ ವ್ಯವಸ್ಥೆ ಕಲ್ಪಿಸಬೇಕು ಎಂದು ಗ್ರಾಮ ಪಂಚಾಯಿತಿ ಹಾಗೂ ಕರ್ನಾಟಕ ಗೃಹ ಮಂಡಳಿಗೆ ಹಲವಾರು ಬಾರಿ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ.
ಸಂಬಂಧಪಟ್ಟವರು ಕೂಡಲೇ ರಸ್ತೆಯ ಮೇಲೆ ಬೆಳದಿರುವ ಗಿಡಗಳನ್ನು ತೆರವುಗೊಳಿಸಬೇಕು, ಕುಡಿಯುವ ನೀರು ಮೊದಲಾದ ಸೌಲಭ್ಯಗಳನ್ನು ಕಲ್ಪಿಸಲು ಕ್ರಮ ಕೈಗೊಳ್ಳಬೇಕಾಗಿದೆ.
– ಕೆ.ಪಿ.ನಂಜುಂಡಸ್ವಾಮಿ, ಕೆಹೆಚ್‌ಬಿ ಬಡಾವಣೆ, ಕೆಂಚಲಗೂಡು ಮೈಸೂರು ತಾ





