ಚಾಮುಂಡಿ ಬೆಟ್ಟದಲ್ಲಿ ಪ್ರಸಾದ ಯೋಜನೆಯಡಿಯಲ್ಲಿ ಕೈಗೊಂಡಿರುವ ಅಭಿವೃದ್ಧಿ ಕಾಮಗಾರಿಯ ಬಗ್ಗೆ ಮೈಸೂರು ರಾಜ ವಂಶಸ್ಥೆ ಪ್ರಮೋದಾದೇವಿ ಒಡೆಯರ್ ಹಾಗೂ ಪ್ರಜ್ಞಾವಂತ ನಾಗರಿಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಮೈಸೂರು ನಗರದ ಯಾವ ಭಾಗ ದಿಂದಲೂ ಚಾಮುಂಡಿ ಬೆಟ್ಟವನ್ನು ನೋಡಿ ದರೂ ಚಾಮುಂಡಿ ಬೆಟ್ಟದ ಗೋಪುರ ಕಾಣುತ್ತದೆ. ಆದರೆ ಅಭಿವೃದ್ಧಿ ಹೆಸರಿನಲ್ಲಿ ಚಾಮುಂಡಿ ಬೆಟ್ಟದ ಗೋಪುರ ಮರೆಯಾಗ ಬಹುದು ಎಂಬ ಆತಂಕ ಮೈಸೂರಿನ ಜನರಲ್ಲಿ ಉಂಟಾ ಗಿದೆ. ಈ ಹಿನ್ನೆಲೆಯಲ್ಲಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಮೈಸೂರಿನ ಪ್ರಜ್ಞಾವಂತ ನಾಗರಿಕರು, ಸಂಘ-ಸಂಸ್ಥೆಗಳು, ಪರಿಸರ ತಜ್ಞರ ಸಲಹೆ ಪಡೆದು ಬೆಟ್ಟದ ಮೂಲ ಸ್ವರೂಪಕ್ಕೆ ಧಕ್ಕೆ ಬಾರದಂತೆ ಅಭಿವೃದ್ಧಿ ಕಾಮಗಾರಿ ನಡೆಸಲು ಕ್ರಮ ಕೈಗೊಳ್ಳಬೇಕಾಗಿದೆ.
-ಬೆಸಗರಹಳ್ಳಿ ರವಿ ಪ್ರಸಾದ್, ಮೈಸೂರು





