ಬೆಂಗಳೂರು: ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಬದುಕು-ಬರಹ ವಿಷಯ ಆಧಾರಿತ ಗಣರಾಜ್ಯೋತ್ಸವ ಫಲಫುಷ್ಪ ಪ್ರದರ್ಶನವು ಲಾಲ್‌ಬಾಗ್‌ನಲ್ಲಿ ನಾಳೆಯಿಂದ ಜನವರಿ.26ರವರೆಗೆ ನಡೆಯಲಿದೆ.
ತೋಟಗಾರಿಕೆ ಇಲಾಖೆ ಹಮ್ಮಿಕೊಂಡಿರುವ 219ನೇ ಫಲಫುಷ್ಪ ಪ್ರದರ್ಶನಕ್ಕೆ ವೇದಿಕೆ ಸಜ್ಜುಗೊಂಡಿದೆ. ಸಿಎಂ ಸಿದ್ದರಾಮಯ್ಯ ಅವರು ನಾಳೆ ಸಂಜೆ 4 ಗಂಟೆಗೆ ಫಲಫುಷ್ಪ ಪ್ರದರ್ಶನಕ್ಕೆ ಚಾಲನೆ ನೀಡಲಿದ್ದಾರೆ.
ತೇಜಸ್ವಿ ಅವರ ಜೀವನ, ಸಾಧನೆ, ಪ್ರಕೃತಿ ಜೊತೆಗಿನ ಒಡನಾಟವನ್ನು ಪುಷ್ಪಗಳಲ್ಲಿ ಅನಾವರಣಗೊಳಿಸಲಾಗುತ್ತಿದೆ. ಈ ಬಾರಿಯ ಫಲಫುಷ್ಪ ಪ್ರದರ್ಶನಕ್ಕೆ 10 ಲಕ್ಷಕ್ಕೂ ಹೆಚ್ಚು ಜನರು ಭೇಟಿ ನೀಡುವ ನಿರೀಕ್ಷೆಯಿದೆ.





