ಮೈಸೂರು: ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಜೊತೆ 5 ನಿಮಿಷ ಮಾತುಕತೆ ನಡೆಸಿದ್ದಾರೆ.
ತಮಿಳುನಾಡಿಗೆ ತೆರಳಿ ಕಾರ್ಯಕ್ರಮ ಮುಗಿಸಿ ಮತ್ತೆ ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ರಾಹುಲ್ ಗಾಂಧಿ ಜೊತೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆಶಿ ಜೊತೆ ಐದು ನಿಮಿಷಗಳ ಕಾಲ ಮಾತುಕತೆ ನಡೆಸಿದ್ದಾರೆ.
ಬಲ್ಲ ಮೂಲಗಳ ಪ್ರಕಾರ ರಾಹುಲ್ ಗಾಂಧಿ ಅವರು ಡಿಸಿಎಂ ಡಿಕೆಶಿಗೆ ಸಂದೇಶ ರವಾನೆ ಮಾಡಿದ್ದಾರೆ ಎನ್ನಲಾಗಿದ್ದು, ನಿಮ್ಮನ್ನು ದೆಹಲಿಗೆ ಬರುವಂತೆ ಆಹ್ವಾನ ನೀಡಲಾಗುವುದು ಎಂದು ಹೇಳಿದ್ದಾರೆ ಎನ್ನಲಾಗಿದೆ.




