ಮಹಾದೇಶ್ ಎಂ ಗೌಡ
ಹನೂರು: ದ್ವಿಚಕ್ರ ವಾಹನ ಸವಾರ ಟ್ರ್ಯಾಕ್ಟರ್‌ಗೆ ಡಿಕ್ಕಿ ಹೊಡೆದ ಪರಿಣಾಮ ತೀವ್ರ ಗಾಯಗೊಂಡು ಮೃತಪಟ್ಟಿರುವ ಘಟನೆ ಪಿ ಜಿ ಪಾಳ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಸವನಗುಡಿ ಸಮೀಪ ಜರುಗಿದೆ.
ಹನೂರು ತಾಲ್ಲೂಕಿನ ಬಸವನಗುಡಿ ಗ್ರಾಮದ ಸೋಲಿಗ ಸಮುದಾಯದ 17 ವರ್ಷದ ಅಪ್ಪು ಎಂಬಾತನೇ ಮೃತಪಟ್ಟ ಯುವಕನಾಗಿದ್ದಾನೆ.
ಘಟನೆಯ ವಿವರ: ಮಂಗಳವಾರ ಬೆಳಿಗ್ಗೆ ಟಿಬೆಟ್ ಕ್ಯಾಂಪ್‌ನಿಂದ ಬಸವನಗುಡಿ ಗ್ರಾಮಕ್ಕೆ ಬರುತ್ತಿದ್ದ ವೇಳೆ ರಸ್ತೆ ಬದಿಯಲ್ಲಿದ್ದ ಟ್ರ್ಯಾಕ್ಟರ್‌ಗೆ ಡಿಕ್ಕಿ ಹೊಡೆದಿದ್ದಾನೆ. ಪರಿಣಾಮ ತೀವ್ರ ಗಾಯಗೊಂಡಿದ್ದ ಬಾಲಕನಿಗೆ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ಖಾಸಗಿ ವಾಹನದ ಮೂಲಕ ಕೊಳ್ಳೇಗಾಲ ಉಪವಿಭಾಗ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಆತ ಮೃತಪಟ್ಟಿದ್ದಾರೆ.
ಘಟನಾ ಸ್ಥಳಕ್ಕೆ ಹನೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ. ಘಟನೆಯ ಸಂಬಂಧ ಹನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




