ನಂಜನಗೂಡು: ನಾಳೆಯಿಂದ ಜನವರಿ.20ರವರೆಗೆ ಸುತ್ತೂರು ಜಾತ್ರಾ ಮಹೋತ್ಸವ ನಡೆಯಲಿದ್ದು, ಇಂದು ಮಹಾದಾಸೋಹಕ್ಕೆ ಅಧಿಕೃತ ಚಾಲನೆ ದೊರೆಯಿತು.
ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ಕಪಿಲಾ ನದಿ ತೀರದಲ್ಲಿರುವ ಶ್ರೀಕ್ಷೇತ್ರ ಸುತ್ತೂರಿನಲ್ಲಿ ನಾಳೆಯಿಂದ ಜನವರಿ.20ರವರೆಗೆ ಜಾತ್ರಾ ಮಹೋತ್ಸವ ಅದ್ಧೂರಿಯಾಗಿ ನಡೆಯಲಿದೆ.
ಈ ಹಿನ್ನೆಲೆಯಲ್ಲಿ ಇಂದು ಸುತ್ತೂರು ಮಠದ ಜಗದ್ಗುರು ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳು ಕರ್ತೃ ಗದ್ದುಗೆಗೆ ಪೂಜೆ ಸಲ್ಲಿಸಿ ಮಹಾದಾಸೋಹಕ್ಕೆ ಅಧಿಕೃತ ಚಾಲನೆ ನೀಡಿದರು.
ಆರು ದಿನಗಳ ಕಾಲ ನಡೆಯುವ ಸುತ್ತೂರು ಜಾತ್ರೆಯಲ್ಲಿ ಪ್ರತಿದಿನ ಲಕ್ಷಾಂತರ ಮಂದಿಗೆ ಪ್ರಸಾದ ವಿನಿಯೋಗ ವ್ಯವಸ್ಥೆ ಮಾಡಲಾಗಿದೆ.





