ಪಟ್ಟಣಂತಿಟ್ಟ: ಶ್ರೀ ಕ್ಷೇತ್ರ ಶಬರಿಮಲೆ ಅಯ್ಯಪ್ಪಸ್ವಾಮಿ ದೇವಾಲಯದ ವಾರ್ಷಿಕ ಮಕರ ಜ್ಯೋತಿ ಇಂದು ದರ್ಶನವಾಗಲಿದೆ.
ಇಂದು ಸಂಜೆ ಮಕರ ಜ್ಯೋತ ಕಾಣಿಸಿಕೊಳ್ಳಲಿದ್ದು, ಭಕ್ತರ ಸಂಖ್ಯೆಗೆ ಈ ಬಾರಿ ಮಿತಿ ಹೇರಲಾಗಿದೆ. 30,000 ಆನ್‌ಲೈನ್ ಹಾಗೂ 5000 ಕೌಂಟರ್ ಟಿಕೆಟ್ ಹೊಂದಿದವರಿಗೆ ಮಾತ್ರವೇ ದೇವಾಲಯದ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿದೆ.
ಭಕ್ತರ ಭದ್ರತೆಗಾಗಿ 2000 ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು, 136 ಸ್ವಯಂಸೇವಕರು, 31 ತುರ್ತು ವಾಹನಗಳ ವ್ಯವಸ್ಥೆ ಮಾಡಲಾಗಿದೆ.





