ಥೈಲ್ಯಾಂಡ್‌ನ ಈಶಾನ್ಯದಲ್ಲಿ ಕ್ರೇನ್ ರೈಲಿನ ಮೇಲೆ ಬಿದ್ದು ಹಳಿತಪ್ಪಿದ ಪರಿಣಾಮ ಕನಿಷ್ಠ 22 ಮಂದಿ ಸಾವನ್ನಪ್ಪಿ ಹಲವರು ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಥೈಲ್ಯಾಂಡ್‌ನಲ್ಲಿ ನಿರ್ಮಾಣ ಹಂತದ ಕಾಮಗಾರಿ ನಡೆಯುವ ವೇಳೆ ಕ್ರೇನ್ ಕುಸಿದು ರೈಲಿನ ಮೇಲೆ ಬಿದ್ದ ಪರಿಣಾಮ ಕನಿಷ್ಠ 22 ಜನರು ಸಾವನ್ನಪ್ಪಿದ್ದಾರೆ. 30 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ರೈಲು ಥೈಲ್ಯಾಂಡ್ ರಾಜಧಾನಿ ಬ್ಯಾಂಕಾಕ್‌ನಿಂದ ದೇಶದ ಈಶಾನ್ಯ ಪ್ರದೇಶಕ್ಕೆ ಪ್ರಯಾಣಿಸುತ್ತಿದ್ದು, ಬ್ಯಾಂಕಾಕ್‌ನಿಂದ ಈಶಾನ್ಯಕ್ಕೆ 230 ಕಿ.ಮೀ ದೂರದಲ್ಲಿರುವ ನಖೋಯ್ ರಾಟ್ಟಸಿಮಾ ಪ್ರಾಂತ್ಯದ ಸಿಖಿಯೊ ಜಿಲ್ಲೆಯಲ್ಲಿ ಬುಧವಾರ ಬೆಳಿಗ್ಗೆ ಈ ಅಪಘಾತ ಸಂಭವಿಸಿದೆ.





