ಬೆಂಗಳೂರು: ಜನವರಿ.16ರಂದು ನಾನು ದೆಹಲಿಗೆ ಹೋಗುತ್ತೇನೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ.
ಇಂದು ಬೆಳಿಗ್ಗೆ ಪ್ರಯತ್ನ ವಿಫಲವಾದರೂ ಪ್ರಾರ್ಥನೆ ವಿಫಲವಾಗುವುದಿಲ್ಲ ಎಂದು ಮಾರ್ಮಿಕ ಟ್ವೀಟ್ ಮಾಡಿದ್ದ ಡಿಸಿಎಂ ಡಿ.ಕೆ.ಶಿವಕುಮಾರ್ ಇದೀಗ ಈ ಕುರಿತು ಸ್ಪಷ್ಟನೆ ನೀಡಿದ್ದಾರೆ.
ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು ಯಾವಾಗಲೂ ಆನ್ ರೆಕಾರ್ಡ್ ಇಟ್ಟುಕೊಳ್ಳಲ್ಲ. ನಾನು ಯಾವಾಗಲೂ ರೆಕಾರ್ಡ್‌ನಲ್ಲೇ ಎಂದು ತಿಳಿಸಿದರು.





