ರಾಮನಗರ: ಈಜಲು ತೆರಳಿದ್ದ ವಿದ್ಯಾರ್ಥಿಗಳಿಬ್ಬರು ಕೆರೆಯಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಕನಕಪುರ ತಾಲ್ಲೂಕಿನ ಕಬ್ಬಾಳು ಕೆರೆಯಲ್ಲಿ ನಡೆದಿದೆ.
ತನುಷ್ ಹಾಗೂ ಸಂತೋಷ್ ಎಂಬುವವರೇ ಮೃತ ವಿದ್ಯಾರ್ಥಿಗಳಾಗಿದ್ದಾರೆ.
ನಿನ್ನೆ ಕಬ್ಬಾಳು ದೇವಾಲಯ್ಕೆಕ ಬೆಂಗಳೂರಿನ ಬನಶಂಕರಿ ಕಾಲೇಜಿನ 11 ವಿದ್ಯಾರ್ಥಿಗಳು ಬಂದು ದೇವಿ ದರ್ಶನದ ಬಳಿಕ ಕಬ್ಬಾಳು ಕೆರೆಯಲ್ಲಿ ಈಜಲು ತೆರಳಿದ್ದಾರೆ. ಈ ವೇಳೆ ಓರ್ವ ವಿದ್ಯಾರ್ಥಿ ನೀರಿನಲ್ಲಿ ಮುಳುಗಿದ್ದು, ಆತನನ್ನು ರಕ್ಷಣೆ ಮಾಡಲು ಹೋದ ಮತ್ತೋರ್ವ ವಿದ್ಯಾರ್ಥಿ ಕೂಡಾ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ.
ಸ್ಥಳಕ್ಕೆ ಸಾತನೂರು ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹಗಳನ್ನು ಹೊರತೆಗೆದಿದ್ದಾರೆ. ಈ ಸಂಬಂಧ ಸಾತನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.





