Mysore
27
few clouds

Social Media

ಗುರುವಾರ, 15 ಜನವರಿ 2026
Light
Dark

ದಲಿತರೊಬ್ಬರು ಸಿಎಂ ಆಗದಿರುವ ಬಗ್ಗೆ ನಮಗೆ ನೋವಿದೆ: ಸಚಿವ ಕೆ.ಎಚ್.ಮುನಿಯಪ್ಪ

ಬೆಂಗಳೂರು: ರಾಜ್ಯದಲ್ಲಿ ದಲಿತ ಸಿಎಂ ಆಗದಿರುವುದರ ಬಗ್ಗೆ ನಮಗೆ ನೋವಿದೆ. ಹೈಕಮಾಂಡ್‌ ಮನಸ್ಸು ಮಾಡಿದರೆ ಎಲ್ಲಾ ಆಗುತ್ತದೆ ಎಂದು ಸಚಿವ ಮುನಿಯಪ್ಪ ಹೇಳಿದರು.

ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು, ಎಲ್ಲವನ್ನೂ ಹೈಕಮಾಂಡ್‌ ತೀರ್ಮಾನ ಮಾಡಬೇಕು. ಮಲ್ಲಿಕಾರ್ಜುನ ಖರ್ಗೆ ಕಾಲದಲ್ಲೇ ಆಗಬೇಕು ಎಂದು ಇತ್ತು. ಹೈಕಮಾಂಡ್‌ ಮನಸ್ಸು ಮಾಡಿದರೆ ಎಲ್ಲಾ ಆಗುತ್ತದೆ. ಹೈಕಮಾಂಡ್‌ಗೆ ಯಾವ ಕಾಲದಲ್ಲಿ ಏನು ಆಗಬೇಕು ಎಂದು ಎಲ್ಲಾ ಗೊತ್ತಿದೆ. ಮಾಡುವ ಸ್ಥಾನದಲ್ಲಿ ಖರ್ಗೆಯವರು ಕೂತಿದ್ದಾರೆ. ನಾವು ಇನ್ನೇನು ಮಾತನಾಡುವುದು ಎಂದು ಹೇಳಿದರು.

ಇನ್ನು ಸಿಎಂ ಹಾಗೂ ಡಿಸಿಎಂ ಅವರು ರಾಹುಲ್‌ ಗಾಂಧಿ ಭೇಟಿ ಮಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ರಾಹುಲ್‌ ಗಾಂಧಿ ಇಬ್ಬರನ್ನೂ ಕರೆದು ಮಾತನಾಡಿದ್ದಾರೆ. ದೆಹಲಿಗೆ ಹೋಗುವ ವಿಚಾರ ಮಾತನಾಡಿದ್ದಾರೆ. ಇದು ಹೈಕಮಾಂಡ್‌ಗೆ ಬಿಟ್ಟ ವಿಚಾರ. ನಾನು ಯಾರ ಪರವೂ ಇಲ್ಲ. ವಿರೋಧವೂ ಇಲ್ಲ ಎಂದು ಹೇಳಿದರು.

 

Tags:
error: Content is protected !!