Mysore
24
broken clouds

Social Media

ಗುರುವಾರ, 15 ಜನವರಿ 2026
Light
Dark

ಬಿಜೆಪಿಗೆ ಮರಳುವಂತೆ ಕಾರ್ಯಕರ್ತರಿಂದ ಒತ್ತಡ ಬರುತ್ತಿದೆ: ಕೆ.ಎಸ್.ಈಶ್ವರಪ್ಪ

ದಾವಣಗೆರೆ: ಬಿಜೆಪಿಗೆ ಮರಳುವಂತೆ ಕಾರ್ಯಕರ್ತರು ಒತ್ತಾಯಿಸುತ್ತಿದ್ದಾರೆ ಎಂದು ಬಿಜೆಪಿಯಿಂದ ಉಚ್ಛಾಟನೆಗೊಂಡಿರುವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.

ಈ ಕುರಿತು ದಾವಣಗೆರೆಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಗೆ ಮರಳುವಂತೆ ಕಾರ್ಯಕರ್ತರಿಂದ ಒತ್ತಡ ಬರುತ್ತಿದೆ. ಪಕ್ಷದಲ್ಲಿ ಪರಿವರ್ತನೆ ಆಗಬೇಕು ಎಂದು ನಾನು ಹೊರಗೆ ಬಂದಿದ್ದೇನೆ. ಆ ಪರಿವರ್ತನೆ ಇವತ್ತಲ್ಲ ನಾಳೆ ಆಗೇ ಆಗುತ್ತದೆ. ಬಿಜೆಪಿ ಕಾರ್ಯಕರ್ತರು ಪಕ್ಷದಲ್ಲಿ ಸಾಕಷ್ಟು ನೋವು ಅನುಭವಿಸುತ್ತಿದ್ದಾರೆ. ನನ್ನ ಮನಸ್ಸಲ್ಲೂ ಯತ್ನಾಳ್‌ ಮನಸ್ಸಲ್ಲೂ ಇದೇ ವಿಚಾರ ಇದೆ ಎಂದು ಹೇಳಿದರು.

Tags:
error: Content is protected !!