Mysore
24
broken clouds

Social Media

ಗುರುವಾರ, 15 ಜನವರಿ 2026
Light
Dark

ಪೌರಾಯುಕ್ತೆಗೆ ಜೀವಬೆದರಿಕೆ ಪ್ರಕರಣ: ಕಾಂಗ್ರೆಸ್‌ ಮುಖಂಡ ರಾಜೀವ್‌ ಗೌಡಗೆ ಕೆಪಿಸಿಸಿಯಿಂದ ನೋಟಿಸ್‌ ಜಾರಿ

ಬೆಂಗಳೂರು: ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆಗೆ ನಿಂದನೆ ಹಾಗೂ ಜೀವಬೆದರಿಕೆ ಹಾಕಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ, ಕಾಂಗ್ರೆಸ್‌ ಮುಖಂಡ ರಾಜೀವ್‌ಗೌಡಗೆ ನೋಟಿಸ್‌ ಜಾರಿ ಮಾಡಲಾಗಿದೆ.

ಅಕ್ರಮವಾಗಿ ಅಳವಡಿಸಿದ್ದ ಬ್ಯಾನರ್‌ ತೆರವು ಮಾಡಿದ್ದಕ್ಕೆ ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾಗೌಡ ಅವರಿಗೆ ಕಾಂಗ್ರೆಸ್‌ ಮುಖಂಡ ರಾಜೀವ್‌ ಗೌಡ ಕರೆ ಮಾಡಿ ಅವಾಚ್ಯವಾಗಿ ನಿಂದಿಸಿ, ಜೀವಬೆದರಿಕೆ ಹಾಕಿದ್ದರು.

ಘಟನೆ ನಡೆಯುತ್ತಿದ್ದಂತೆ ರಾಜೀವ್‌ ಗೌಡ ವಿರುದ್ಧ ಎಲ್ಲೆಡೆ ಆಕ್ರೋಶ ವ್ಯಕ್ತವಾಗಿತ್ತು. ರಾಜೀವ್‌ ಗೌಡ ವಿರುದ್ಧ ಎಫ್‌ಐಆರ್‌ ದಾಖಲಾಗುತ್ತಿದ್ದಂತೆ ರಾಜೀವ್‌ ಗೌಡ ತಲೆಮರೆಸಿಕೊಂಡು ನಾಪತ್ತೆಯಾಗಿದ್ದಾರೆ.

ಈ ಎಲ್ಲಾ ಬೆಳವಣಿಗೆಗಳ ನಡುವೆ ರಾಜೀವ್‌ ಗೌಡ ಅವರನ್ನು ಬಂಧಿಸಲು ಪೊಲೀಸರು ಮೂರು ವಿಶೇಷ ತಂಡ ರಚನೆ ಮಾಡಿದ್ದು, ಅವರ ಪತ್ತೆಗಾಗಿ ಹುಡುಕಾಟ ನಡೆಸಿದ್ದಾರೆ.

ರಾಜೀವ್‌ ಗೌಡ ವಿರುದ್ಧ ಪ್ರತಿಭಟನೆಗಳು ತೀವ್ರಗೊಳ್ಳುತ್ತಿದ್ದಂತೆ ಎಚ್ಚೆತ್ತ ಕೆಪಿಸಿಸಿ, ರಾಜೀವ್‌ ಗೌಡಗೆ ನೋಟಿಸ್‌ ಜಾರಿ ಮಾಡಿದೆ.

ಈ ಬಗ್ಗೆ ಒಂದು ವಾರದೊಳಗೆ ಸೂಕ್ತ ಕಾರಣ ನೀಡಿ ಉತ್ತರಿಸಬೇಕು. ಇಲ್ಲವಾದಲ್ಲಿ ನಿಮ್ಮ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದೆ.

 

Tags:
error: Content is protected !!