Mysore
24
scattered clouds

Social Media

ಶನಿವಾರ, 17 ಜನವರಿ 2026
Light
Dark

ದೈಹಿಕ ದೃಢತೆಯಿಂದ ಮಾನಸಿಕ ಒತ್ತಡ ನಿವಾರಣೆ: ಸಚಿವ ಚಲುವರಾಯಸ್ವಾಮಿ

ಮಂಡ್ಯ: ಸರ್ಕಾರಿ ನೌಕರರು ದೈಹಿಕವಾಗಿ ಸದೃಢರಾಗಬೇಕು. ಇದರಿಂದ ಆರೋಗ್ಯ ಉತ್ತಮವಾಗಿರುತ್ತದೆ ಎಂದು ಸಚಿವ ಚಲುವರಾಯಸ್ವಾಮಿ ಹೇಳಿದರು.

ಮಂಡ್ಯ ನಗರದ ಸರ್.ಎಂ.ವಿಶ್ವೇಶ್ವರಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಮಂಡ್ಯ ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳು 2025-26ನ್ನು ಉದ್ಘಾಟಿಸಿ ಮಾತನಾಡಿದರು.

ದೈಹಿಕವಾಗಿ ದೃಢತೆಯನ್ನು ಕಾಪಾಡಿಕೊಳ್ಳುವುದರಿಂದ ಮಾನಸಿಕ ಒತ್ತಡ ನಿವಾರಣೆಯಾಗುತ್ತದೆ. ಸರ್ಕಾರಿ ನೌಕರರು ಇಂತಹ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಭಾಗವಹಿಸಿ ಉತ್ತಮ ಪ್ರದರ್ಶನ ನೀಡಬೇಖು. ಕೇವಲ ಜಿಲ್ಲಾ ಮಟ್ಟಕ್ಕೆ ಸೀಮಿತವಾಗದೇ ರಾಜ್ಯ ಮತ್ತು ರಾಷ್ಟ್ರ ಮಟ್ಟಕ್ಕೆ ಸರ್ಕಾರಿ ನೌಕರರ ಕ್ರೀಡಾಕೂಟದಲ್ಲಿ ಪಾಲ್ಗೊಳ್ಳುವ ಮೂಲಕ ರಾಜ್ಯಕ್ಕೆ ಮತ್ತು ಜಿಲ್ಲೆಗೆ ಮಾದರಿಯಾಗಬೇಕು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಶಾಸಕ ರವಿಕುಮಾರ್‌, ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ನಾಗೇಶ್‌, ಜಿಲ್ಲಾಧಿಕಾರಿ ಡಾ.ಕುಮಾರ, ಜಿಲ್ಲಾ ಪಂಚಾಯತ್‌ ಸಿಇಓ ನಂದಿನಿ, ಜಿಲ್ಲಾ ಪೊಲೀಸ್‌ ಆಧೀಕ್ಷಕಿ ಶೋಭಾರಾಣಿ ಸೇರಿದಂತೆ ಹಲವು ಅಧಿಕಾರಿಗಳು ಭಾಗಿಯಾಗಿದ್ದರು.

Tags:
error: Content is protected !!